ವಳಲಂಬೆ:ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ ಗುತ್ತಿಗಾರು ಹಾಗೂ ಸ.ಹಿ.ಪ್ರಾ.ಶಾಲೆ ವಳಲಂಬೆ ಇವುಗಳ ಜಂಟಿ ಆಶ್ರಯದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ವಳಲಂಬೆ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಹೊಸೊಳಿಕೆ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಬಳಸಿಕೊಳ್ಳುವುದರ ಮೂಲಕ ತನ್ನ ಪ್ರತಿಭೆಯನ್ನು ಹೊರಹಾಕಲು ಸಾಧ್ಯ, ಉತ್ತಮ ಸಮಾಜ ನಿರ್ಮಾಣಕ್ಕೆ ವಿಧ್ಯಾರ್ಥಿಗಳು ಪ್ರಯತ್ನಿಸಬೇಕು ಎಂದರು.
ಎಸ್.ಡಿ.ಎಂ.ಸಿ.ಅಧ್ಯಕ್ಷ ಜಯರಾಮ ಅಡ್ಡನಪಾರೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಲಿಂಗಪ್ಪ ಬೆಳ್ಳಾರೆ ಆಗಮಿಸಿದ್ದರು.
ವೇದಿಕೆಯಲ್ಲಿ ಹಿ.ವಿದ್ಯಾರ್ಥಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಪುರ್ಲುಮಕ್ಕಿ , ಸಮೂಹ ಸಂಪನ್ಮೂಲ ವ್ಯಕಿ ಸಂತೋಷ್, ಮುಖ್ಯ ಶಿಕ್ಷಕಿ ಪ್ರಮೀಳಾ ಪಿ.ಎಸ್. ಉಪಸ್ಥಿತರಿದ್ದರು.
ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿ ತೇಜಮ್ಮ ಕಾಯರ ಅವರನ್ನು ಸನ್ಮಾನಿಸಲಾಯಿತು.
ಪ್ರಮೀಳಾ ಪಿ.ಎಸ್. ಸ್ವಾಗತಿಸಿ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಅಭಿಲಾಷಾ ಎಸ್ ಎನ್. ವಂದಿಸಿದರು. ಶಿಕ್ಷಕ ಶಶಿಧರ ಮಾವಿನಕಟ್ಟೆ ವಂದಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement