ಗುತ್ತಿಗಾರು : ಶ್ರೀ ಶಂಖಪಾಲ ಸುಬ್ರಹ್ಮಣ್ಯ ಯಕ್ಷಗಾನ ಕಲಾಕೇಂದ್ರದ 2 ನೇ ವರ್ಷದ ಯಕ್ಷ ವಿದ್ಯಾರ್ಥಿಗಳ ರಂಗಪ್ರವೇಶ ಹಾಗೂ ಯಕ್ಷೋತ್ಸವ ವಳಲಬೆಯಲ್ಲಿ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ನಿವೃತ್ತ ಪ್ರಾಂಶುಪಾಲ ಯು ಸು ಗೌ ಕಾರ್ಯಕ್ರಮವನ್ನು ಚೆಂಡೆ ಬಾರಿಸುವ ಮೂಲಕ ಉದ್ಘಾಟಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಹೊಸೋಳಿಕೆ ಸಭಾದ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಲಾವಿದ ಜನಾರ್ಧನ ಮಾವಿನಕಟ್ಟೆ, ಯಕ್ಷಪೋಷಕ ವೇಣುಗೋಪಾಲ ದೇರಪ್ಪಜ್ಜನ ಮನೆ, ನಾಟ್ಯ ಗುರು ಗಿರೀಶ್ ಹಾಡಿಕಲ್ಲು , ವೆಂಕಟ್ ವಳಲಂಬೆ, ಸೋಮಶೇಖರ್ ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭ ಸನ್ಮಾನ ಕಾರ್ಯಕ್ರಮ ನಡೆಯಿತು.
ವೆಂಕಟ್ ದಂಬೆಕೋಡಿ ಸ್ವಾಗತಿಸಿ ಮಾಧವ ಮೂಕಮಲೆ ವಂದಿಸಿದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ವಳಲಂಬೆಯಲ್ಲಿ ಯಕ್ಷೋತ್ಸವ"