ವಳಲಂಬೆ ಸಾರ್ವಜನಿಕ ಗಣೇಶೋತ್ಸವ ಧಾರ್ಮಿಕ ಸಭೆ

September 2, 2019
10:23 PM

ಗುತ್ತಿಗಾರು: ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುತ್ತಿರುವ 17 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮ ಸೋಮವಾರ ಸಂಜೆ ನಡೆಯಿತು.

ಸಭೆಯಲ್ಲಿ ಧಾರ್ಮಿಕ  ಉಪನ್ಯಾಸ ನೀಡಿದ  ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವೇ.ಮೂ. ಮಹಾಬಲೇಶ್ವರ ಭಟ್ “ದೇವತಾ ಕಾರ್ಯಗಳು ಆಡಂಬರ, ಅದ್ದೂರಿತನಕ್ಕೆ ಮೀಸಲಾಗದೇ ಲೋಕಕಲ್ಯಾಣಾರ್ಥವಾಗಿ ಇರಬೇಕು, ಗಣೇಶೋತ್ಸವಗಳಲ್ಲಿ ಭಾರತೀಯ ಪದ್ಧತಿಯ  ವಾದ್ಯಘೋಷಗಳು ಹೆಚ್ಚಾಗಿ ಕಂಡುಬರಬೇಕು. ಇದು ಮುಂದಿನ ಪೀಳಿಗೆಗೆ ಉತ್ತಮ ಸಂದೇಶ ನೀಡುತ್ತದೆ ಎಂದರು.

ವೇದಿಕೆಯಲ್ಲಿ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಹೊಸೊಳಿಕೆ, ಗಣೇಶೋತ್ಸವ ಸಮಿತಿಯ ಕೋಶಾಧಿಕಾರಿ ದುರ್ಗೇಶ್ ಪಾರೆಪ್ಪಾಡಿ ಉಪಸ್ಥಿತರಿದ್ದರು. ಸತೀಶ್ ಮೂಕಮಲೆ ಅಧ್ಯಕ್ಷತೆ ವಹಿಸಿದ್ದರು.

ಗೌರವಾಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಮೊಟ್ಟೆಮನೆ ವಂದಿಸಿದರು. ಕಿಶೋರ್ ಕುಮಾರ್ ಪೈಕ ನಿರೂಪಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ‌ ವಿತರಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror