ವಿಜಯದಶಮಿ ಸಭಾ ಕಾರ್ಯಕ್ರಮ : ಸೌಹಾರ್ದತೆಯ ಸಂಕೇತ ದಸರಾ ಹಬ್ಬ – ಶಾಸಕ ಅಪ್ಪಚ್ಚು ರಂಜನ್

October 10, 2019
11:11 AM

ಮಡಿಕೇರಿ :ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಎಲ್ಲಾ ಧರ್ಮದವರೂ ಒಗ್ಗೂಡಿ ಆಚರಿಸುವ ಹಬ್ಬ ದಸರಾವೆಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅಭಿಪ್ರಾಯಪಟ್ಟಿದ್ದಾರೆ.

ಮಡಿಕೇರಿ ನಗರ ದಸರಾ ಸಮಿತಿ ಹಾಗೂ ದಸರಾ ಜನೋತ್ಸವ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ವಿಜಯದಶಮಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮಡಿಕೇರಿ ದಸರಾಕ್ಕೆ ತನ್ನದೇ ಆದ ಇತಿಹಾಸವಿದ್ದು, ದಸರಾ ಕಾರ್ಯಕ್ರಮಗಳ ಆಚರಣೆಯಿಂದ ನಾಡಿನ ಸಂಸ್ಕøತಿ, ಕಲೆ ಉಳಿಸಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಈ ಬಾರಿಯ ಮಹಿಳಾ, ಮಕ್ಕಳ, ಯುವಜನರ ಹಾಗೂ ಜನಪದೋತ್ಸವ ದಸರಾಗಳು ಜನಮನ ಸೆಳೆದವು ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ ಮಡಿಕೇರಿ ದಸರಾಕ್ಕೆ ಹೆಚ್ಚಿನ ಜನ ಸೇರಿ ಮೆರುಗು ತಂದಿರುವುದು ವಿಶೇಷವಾಗಿದೆ. ಮಡಿಕೇರಿ ದಸರಾ ಜನಸಾಗರದ ಉತ್ಸವವಾಗಿದೆ ಎಂದರು.

ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ರಾಬಿನ್ ದೇವಯ್ಯ ಅವರು ಮಾತನಾಡಿ ಮಡಿಕೇರಿ ದಸರಾ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಜಿಲ್ಲಾಡಳಿತ ಹೀಗೆ ಎಲ್ಲರ ಸಹಕಾರದಿಂದ ಅಚ್ಚುಕಟ್ಟಾಗಿ ನಡೆದಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ.ರಾಜೇಂದ್ರ ಅವರು ಮಕ್ಕಳ, ಮಹಿಳೆಯರ, ಜನಪದೋತ್ಸವ ವಿಶಿಷ್ಟವಾಗಿ ಮೂಡಿ ಬಂದಿತು. ದಶಮಂಟಪಗಳನ್ನು ನೋಡುವುದು ವಿಶೇಷವಾಗಿದೆ ಎಂದು ಅವರು ಹೇಳಿದರು.

ಕಳೆದ ಎರಡು ವರ್ಷಗಳಿಂದ ಪ್ರಕೃತಿ ವಿಕೋಪದಿಂದ ಹಲವು ಸಂಕಷ್ಟಗಳನ್ನು ಎದುರಿಸುವಂತಾಯಿತು. ಪ್ರಕೃತಿಯ ಶಕ್ತಿ ಮುಂದೆ ಮಾನವ ಏನೂ ಅಲ್ಲ. ಸಂತ್ರಸ್ತರಿಗೆ ಕೈಲಾದಷ್ಟು ನೆರವು ನೀಡಬೇಕಿದೆ. ಪ್ರಕೃತಿ ವಿಕೋಪ ಮುಂದೆಂದೂ ಸಂಭವಿಸದಿರಲಿ ಎಂದು ಇದೇ ಸಂದರ್ಭದಲ್ಲಿ ಆಶಿಸಿದರು.

ಪ್ರಮುಖರಾದ ಬಿ.ಬಿ.ಭಾರತೀಶ್ ಅವರು ಮಾತನಾಡಿ ಪ್ರಕೃತಿ ವಿಕೋಪದ ನಡುವೆ ನಾಲ್ಕು ಶಕ್ತಿ ದೇವತೆಗಳನ್ನು ಪೂಜಿಸಿ ದಸರಾ ಆಚರಿಸುತ್ತಿರುವುದು ವಿಶೇಷವಾಗಿದೆ ಎಂದರು.
ಆಧುನಿಕವಾಗಿ ಹೊಸ ಹೊಸ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ರೈತರು, ಕಾರ್ಮಿಕರು, ವ್ಯಾಪಾರಿಗಳು, ಹೀಗೆ ಎಲ್ಲರಿಗೂ ದಸರಾ ಉಪಯುಕ್ತವಾಗಿದೆ ಎಂದು ಅವರು ಹೇಳಿದರು.

ಕೆ.ಕೆ.ಮಂಜುನಾಥ್ ಕುಮಾರ್ ಅವರು ಮಾತನಾಡಿ ಪ್ರಕೃತಿ ವಿಕೋಪದಿಂದಾಗಿ ಕಳೆದ ವರ್ಷ 20 ಮಂದಿ, ಈ ಬಾರಿ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಜೊತೆಗೆ ಬೆಳೆ ನಷ್ಟ ಉಂಟಾಗಿದೆ. ಕಾರ್ಮಿಕರಿಗೆ ಕೆಲಸ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಬಡವರ ಜೀವನ ಸಂಕಷ್ಟಕ್ಕೆ ದೂಡಿದೆ. ಇವುಗಳೆಲ್ಲವನ್ನೂ ಶಕ್ತಿ ದೇವತೆಗಳು ನಿವಾರಿಸುವಂತಾಗಲಿ ಎಂದು ಅವರು ಪ್ರಾರ್ಥಿಸಿದರು.

ವಾರ್ತಾಧಿಕಾರಿ ಚಿನ್ನಸ್ವಾಮಿ ಅವರು ಮಾತನಾಡಿ ಮಡಿಕೇರಿ ದಸರಾ ವರ್ಷದಿಂದ ವರ್ಷಕ್ಕೆ ವಿಭಿನ್ನ ಹಾಗೂ ವಿಶಿಷ್ಟವಾಗಿ ಜರುಗುತ್ತಿದೆ. ಈ ಬಾರಿ ಜನಪದೋತ್ಸವವು ಗ್ರಾಮೀಣ ಪ್ರದೇಶದ ಸೊಗಡು, ಕಲೆ, ಸಂಸ್ಕøತಿಯನ್ನು ಪ್ರತಿಬಿಂಬಿಸುವಲ್ಲಿ ವಿಶಿಷ್ಟವಾಗಿತ್ತು ಎಂದರು.

ಪೌರಾಯುಕ್ತರಾದ ರಮೇಶ್ ಅವರು ಮಾತನಾಡಿ ಮಡಿಕೇರಿ ದಸರಾವನ್ನು ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನಡೆಸಲಾಗಿದೆ ಎಂದರು. ದಸರಾ ಸಮಿತಿಯ ಕಾರ್ಯಾಧ್ಯಕ್ಷರಾದ ರಾಬಿನ್ ದೇವಯ್ಯ, ಗೌರವಾಧ್ಯಕ್ಷರಾದ ಪಿ.ಡಿ.ಪೊನ್ನಪ್ಪ ಇತರರು ಮಾತನಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ನಗರ ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್, ಸಾಂಸ್ಕøತಿಕ ಸಮಿತಿ ಅಧ್ಯಕ್ಷರಾದ ಆರ್.ಬಿ.ರವಿ, ಸ್ವಾಗತ ಸಮಿತಿ ಅಧ್ಯಕ್ಷರಾದ ಕಾನೆಹಿತ್ಲು ಮೊಣ್ಣಪ್ಪ, ವೇದಿಕೆ ಸಮಿತಿ ಅಧ್ಯಕ್ಷರಾದ ಎ.ಜಿ.ರಮೇಶ್ ಇತರರು ಹಾಜರಿದ್ದರು.

ಅನಿಲ್ ಎಚ್.ಟಿ. ನಿರೂಪಿಸಿ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾದ ಆರ್.ಬಿ.ರವಿ ಸ್ವಾಗತಿಸಿ, ತೆನ್ನಿರ ಮೈನಾ ವಂದಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror