ಬೆಂಗಳೂರು : ಗ್ರಾಹಕರಿಗೆ ವಿದ್ಯುತ್ ದರ ಏರಿಕೆಯ ಶಾಕ್ ಸುದ್ದಿ ಬಂದಿದೆ. 2019-20 ನೇ ಸಾಲಿನಲ್ಲಿ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆ ಏರಿಕೆ ಮಾಡಲಾಗಿದೆ. ಮೆಸ್ಕಾಂ ಒಂದು ಯೂನಿಟ್ ವಿದ್ಯುತ್ ಗೆ 1.38 ಪೈಸೆ ಏರಿಕೆ ಕೋರಿತ್ತು.ಆದರೆ ಕೆಇಆರ್ ಸಿ ಸರಾಸರಿ ಯೂನಿಟ್ ಗೆ 33 ಪೈಸೆ ಏರಿಕೆಗೆ ಒಪ್ಪಿಗೆ ನೀಡಿದೆ.
ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ ಶಂಭುದಯಾಳ್ ಮೀನ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ವಿದ್ಯುತ್ ದರ 33 ಪೈಸೆ ಏರಿಕೆ ಮಾಡಲಾಗಿದೆ. ಬೆಸ್ಕಾಂ ಪ್ರತಿ ಯೂನಿಟ್ ಗೆ 1.01 ರೂ. ಏರಿಕೆಗೆ ಕೆಇಆರ್ ಸಿ ಗೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಕೆಇಆರ್ ಸಿ ಯೂನಿಟ್ ಗೆ 33 ಪೈಸೆ ಏರಿಕೆಗೆ ಒಪ್ಪಿಗೆ ನೀಡಿದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ವಿದ್ಯುತ್ ಗ್ರಾಹಕರಿಗೆ ದರ ಏರಿಕೆಯ ಶಾಕ್….!"