Advertisement
ಬಂಟ್ವಾಳ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಆಕಸ್ಮಿಕವಾಗಿ ಸ್ಪರ್ಶಿಸಿ ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಬಾರಕಿನಡಿ ಎಂಬಲ್ಲಿ ಮಂಗಳವಾರ ಸಂಭವಿಸಿದೆ. ಕೃಷಿಕ ಗೋಪಾಲಕೖಷ್ಣ ಶೆಟ್ಟಿ (65) ಮತ್ತು ಅವರ ಪುತ್ರಿ ದಿವ್ಯಾ ಶೆಟ್ಟಿ (29) ಮೃತಪಟ್ಟವರು.
ಗೋಪಾಲಕೃಷ್ಣ ಅವರು ಚೆನ್ನೈತ್ಯೋಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ.
ಮಂಗಳವಾರ ಸಂಜೆ ತಂದೆ ಹಾಗೂ ಮಗಳು ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದರು. ಈ ವೇಳೆ ತೋಟದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕ ತುಳಿದು ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹಳೆಯದಾದ ತಂತಿಗಳನ್ನು ಮೆಸ್ಕಾಂ ಬದಲಿಸದೆ ಇರುವುದು ಈ ಘಟನೆಗೆ ಮೂಲ ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಘಟನಾ ಸ್ಥಳಕ್ಕೆ ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಬಂಟ್ವಾಳ ತಹಶೀಲ್ದಾರ್
ಸಹಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗಳು ಸಾವು"