ಪುತ್ತೂರು: ಭಾರತದ ಎಲ್ಲಾ ಪ್ರಜೆಗಳು ಒಟ್ಟುಗೂಡಿ ಸಂವಿಧಾನವನ್ನು ರಚನೆ ಮಾಡಿದ್ದಾರೆ. ಇದು ದೇಶ ಎಲ್ಲಾ ಪ್ರಜೆಗಳು ಒಂದೇ ಎಂಬ ಭಾವನೆಯನ್ನು ತೋರಿಸುತ್ತದೆ ಎಂದು ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.
ಅವರು ಇಲ್ಲಿನ ವಿವೇಕಾನಂದ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ‘ಒಂದು ದೇಶ ಒಂದು ಸಂವಿಧಾನ’ ಎಂಬ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸೋಮವಾರ ಮಾತನಾಡಿದರು. ಭಾರತದ ಸಂವಿಧಾನವು ದೇಶದ ಪ್ರಜೆಗಳ ಜಾತಿ, ಧರ್ಮದ ಒಂದು ಗ್ರಂಥವಾಗಿದೆ. ರಾಷ್ಟ್ರದ ಎಲ್ಲಾ ಪ್ರಜೆಗಳಿಗೆ ನಿಯಮ ಹೇಗೋ ಅದೇ ರೀತಿ ರಾಷ್ಟ್ರೀಯ ಸೇವಾ ಯೋಜನೆಯ ಮೂಲ ಉದ್ದೇಶವೂ ಆಗಿದೆ. ಎನ್‍ಎಸ್‍ಎಸ್ ಎಂಬುದು ಬೇರೆ ಬೇರೆಯ ಊರಿನವರನ್ನು ಒಂದೇ ಸೂರಿನಲ್ಲಿ ತಮ್ಮ ಜೀವನ ಶೈಲಿಯನ್ನು ಅರಿತುಕೊಳ್ಳುವಂತೆ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ. ಹಾಗೆಯೇ ಭಾರತ ಸಂವಿಧಾನದ ಉದ್ದೇಶವೂ ಇದೇ ರೀತಿಯದ್ದಾಗಿದೆ ಎಂದು ನುಡಿದರು.
ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾದ ಶ್ರೀನಾಥ್ ಉಪಸ್ಥಿತರಿದ್ದರು.
ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ರಮೇಶ್ ಕೆ. ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕಿಯರಾದ ಮೋನಿಷ ವಂದಿಸಿ, ಸುಷೀಯ ಕಾರ್ಯಕ್ರಮ ನಿರೂಪಿಸಿದರು.