ವಿವೇಕಾನಂದ ಪದವಿಪೂರ್ವ ಕಾಲೇಜಿನಿಂದ ವಿನೂತನ ಪ್ರಯತ್ನ | ಪಿಯುಸಿಗೆ ಸೇರಲಿಚ್ಚಿಸಿರುವ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಭಾಗದಲ್ಲಿ ಉಚಿತ ಯುಟ್ಯೂಬ್ ಕ್ಲಾಸ್ ಆಯೋಜನೆ

July 11, 2020
10:50 AM

ಪುತ್ತೂರು: ಕೊರೋನಾ ವನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಲಾ , ಕಾಲೇಜುಗಳು ಆರಂಭಗೊಳ್ಳದೆ ಶಿಕ್ಷಣದ ಬಹು ಅಮೂಲ್ಯ ಸಮಯವನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳಿಗೆ ಇನ್ನಷ್ಟು ಸಂಕಷ್ಟಕ್ಕೀಡಾಗದಂತೆ ಮಾಡಲು ವಿವೇಕಾನಂದ ಸಂಸ್ಥೆಯು ಮುಂದಾಗಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಈಗಾಗಲೇ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಗಿಸಿದ ಮತ್ತು ಮುಂದಿನ ವಿದ್ಯಾಭ್ಯಾಸಕ್ಕಾಗಿ ಪ್ರಥಮ ಪಿಯುಸಿಗೆ ಸೇರಲಿಚ್ಚಿಸಿರುವ ವಿದ್ಯಾರ್ಥಿಗಳಿಗೆ ಜುಲೈ 13 ರಿಂದ ವಿಜ್ಞಾನ ವಿಭಾಗದಲ್ಲಿ ಉಚಿತ ಯುಟ್ಯೂಬ್ ಕ್ಲಾಸ್ ಗಳನ್ನು ಆಯೋಜಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಅವಕಾಶವನ್ನು ಒದಗಿಸುತ್ತಿದೆ.

ಅನುಭವೀ ಹಾಗೂ ನುರಿತ ಉಪನ್ಯಾಸಕ ವೃಂದದವರಿಂದ ಪಿಸಿಯಂಬಿ ವಿಷಯಗಳಲ್ಲಿ ತರಗತಿಗಳು ನಡೆಯಲಿದ್ದು ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ವಿವರಣೆ ಮತ್ತು ಪ್ರಯೋಗಗಳ ಮೂಲಕ ವಿಶೇಷ ಪೂರಕ ಪಾಠ ನಡೆಯಲಿದೆ. ವಿದ್ಯಾರ್ಥಿಗಳು ಮನೆಯಿಂದಲೇ ಲ್ಯಾಪ್‍ಟಾಪ್ ಅಥವಾ ಮೊಬೈಲ್ ಬಳಸಿ ತರಬೇತಿಯನ್ನು ಪಡೆಯಬಹುದು. ತರಬೇತಿ ಅವಧಿಯಲ್ಲಿ ಪ್ರತಿದಿನ ತರಗತಿಗಳು ನಡೆಯಲಿದ್ದು ವಿಸ್ತೃತ ಮತ್ತು ಸರಳವಾದ ಉಪನ್ಯಾಸ ಕಾರ್ಯಕ್ರಮವಿರುತ್ತದೆ.

ತಮ್ಮದೇ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತರಗತಿಯ ವಿಡಿಯೋಗಳನ್ನು ಎಷ್ಟು ಬಾರಿಯದರೂ ವೀಕ್ಷಿಸಲು ಅವಕಾಶವಿರುತ್ತದೆ. ಇದರ ಜೊತೆಗೆ ಯಾವುದೇ ಸಂಶಯಗಳಿಗೆ ಫೋನ್ ಅಥವಾ ವಾಟ್ಸಾಪ್ ಮೂಲಕವೂ ವಿವರಣೆ ನೀಡಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ವಾಟ್ಸಾಪ್ ದೂರವಾಣಿ ಸಂಖ್ಯೆಯನ್ನು 9731640407 ಅಥವಾ 9742001857 ದೂರವಾಣಿ ಸಂಖ್ಯೆಗಳಲ್ಲಿ ನೋಂದಾವಣಿ ಮಾಡಿಕೊಂಡು ಇದರ ಪ್ರಯೊಜನವನ್ನು ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ಉಚಿತ ತರಗತಿಗಳ ಸದುಪಯೋಗ ಪಡಿಸಿಕೊಳ್ಳಬೇಕೆಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror