ಪುತ್ತೂರು: ಮಾಧ್ಯಮಗಳು ರಾಷ್ಟ್ರೀಯತೆ ಪಂಥವನ್ನೇ ಆದರ್ಶವಾಗಿರಿಸಿ ಕಾರ್ಯತತ್ಪರರಾಗಬೇಕು. ದೇಶದ ಉನ್ನತಿಗೆ ಪೂರಕವಾಗುವ ತೆರನಾದ ಪತ್ರಿಕೋದ್ಯಮ ಅಗತ್ಯವಿವೆ ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.
ಅವರು ಮಂಗಳವಾರ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗಕ್ಕಾಗಿ ರೂಪಿಸಲಾದ ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋದ ಉದ್ಘಾಟನೆಯನ್ನು ನೆರವೇರಿಸಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸಂದರ್ಶನ ನೀಡಿ ಮಾತನಾಡಿದರು.
ದೇಶ ವಿರೋಧಿ ಚಿಂತನೆಗೆ ಬೆಂಬಲವನ್ನು ನೀಡುವ ಕಾರ್ಯಗಳನ್ನು ಮಾಧ್ಯಮಗಳು ಮಾಡಬಾರದು. ಇದರ ಬದಲು ರಾಷ್ಟ್ರೀಯ ಚಿಂತನೆಗಳನ್ನು ಪ್ರೇರೇಪಿಸುವ ಕಾರ್ಯ ಮಾಧ್ಯಮದಿಂದಾಗಬೇಕು. ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋದ ಮೂಲಕ ಅತ್ಯುತ್ಕೃಷ್ಟ ಮುಂದಿನ ಪತ್ರಕರ್ತರನ್ನು ತಯಾರಿಸುವ ಉದ್ದೇಶವನ್ನು ಹೊಂದಿದ್ದೇವೆ. ಪತ್ರಿಕೋದ್ಯಮ ಸಂಬಂಧಿ ಚಟುವಟಿಕೆಗಳಿಗೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಿಕೊಡಲು ವಿವೇಕಾನಂದ ವಿದ್ಯಾವರ್ಧಕ ಸಂಘ ಸಿದ್ಧವಾಗಿದೆ ಎಂದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ವಿವೇಕಾನಂದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಪಿ.ಶ್ರೀನಿವಾಸ ಪೈ, ಸಂಚಾಲಕ ಎಂ.ಟಿ.ಜಯರಾಮ ಭಟ್, ಕೋಶಾಧಿಕಾರಿ ಸೇಡಿಯಾಪು ಜನಾರ್ಧನ ಭಟ್, ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್, ವಿಶ್ರಾಂತ ಪ್ರಾಂಶುಪಾಲ ಡಾ. ಎಚ್.ಮಾಧವ ಭಟ್, ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿಜಯ ಸರಸ್ವತಿ, ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್, ಕ್ಯಾಂಪಸ್ ಮ್ಯಾನೇಜರ್ ಲಕ್ಷ್ಮೀಪ್ರಸಾದ್, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ರಾಕೇಶ್ ಕುಮಾರ್ ಕಮ್ಮಜೆ, ಭವ್ಯಾ ಪಿ.ಆರ್., ಸುಶ್ಮಿತಾ ಜೆ., ರಾಧಿಕ ಕಾನತ್ತಡ್ಕ, ಪ್ರಜ್ಞಾ ಬಾರ್ಯ, ಗಣೇಶ್ ಪ್ರಸಾದ್, ಭರತ್‍ರಾಜ್, ಸ್ಟುಡಿಯೋ ನಿರ್ವಾಹಕ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋ ಲೋಕಾರ್ಪಣೆ"