ವಿಶ್ವಕಪ್: ಸಿಂಹಳೀಯರಿಗೆ ರೋಚಕ ಜಯ

July 2, 2019
6:25 AM

ಚೆಸ್ಟರ್-ಲೀ-ಸ್ಟ್ರೀಟ್: ಮಧ್ಯಮ ಕ್ರಮಾಂಕದ ದಾಂಡಿಗ ನಿಕೊಲಸ್ ಪೂರನ್ ಸಿಡಿಸಿದ ಚೊಚ್ಚಲ ಶತಕದ(118, 103 ಎಸೆತ, 11 ಬೌಂಡರಿ, 4 ಸಿಕ್ಸರ್) ಹೊರತಾಗಿಯೂ ವಿಶ್ವಕಪ್‌ನ 39ನೇ ಪಂದ್ಯದಲ್ಲಿ ಶ್ರೀಲಂಕಾ ತಂಡ ವೆಸ್ಟ್ ಇಂಡೀಸ್ ತಂಡವನ್ನು 23 ರನ್‌ಗಳಿಂದ ರೋಚಕವಾಗಿ ಮಣಿಸಿದೆ. ಗೆಲ್ಲಲು 339 ರನ್ ಗುರಿ ಪಡೆದ ವೆಸ್ಟ್‌ಇಂಡೀಸ್ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 315 ರನ್ ಗಳಿಸಿ ವೀರೋಚಿತ ಸೋಲುಂಡಿತು.

ವಿಂಡೀಸ್ ಪರ ಸಿನ್ನರ್ ಅಲ್ಲೆನ್ ಮಿಂಚಿನ ಅರ್ಧಶತಕ(51, 32 ಎಸೆತ, 7 ಬೌಂಡರಿ, 1 ಸಿಕ್ಸರ್)ಸಿಡಿಸಿ ಗಮನ ಸೆಳೆದರು. ಆರಂಭಿಕ ಆಟಗಾರ ಕ್ರಿಸ್ ಗೇಲ್(32),ಹೆಟ್ಮೆಯರ್ (29) ಹಾಗೂ ಹೋಲ್ಡರ್(26) ಎರಡಂಕೆಯ ಸ್ಕೋರ್ ಗಳಿಸಿದರು.

ಶ್ರೀಲಂಕಾದ ಪರ ಲಸಿತ್ ಮಾಲಿಂಗ(3-55) ಯಶಸ್ವಿ ಬೌಲರ್ ಎನಿಸಿಕೊಂಡರು.

ಇದಕ್ಕೂ ಮೊದಲು ಶ್ರೀಲಂಕಾ ಅಗ್ರ ಕ್ರಮಾಂಕದ ದಾಂಡಿಗ ಅವಿಷ್ಕಾ ಫೆರ್ನಾಂಡೊ ಚೊಚ್ಚಲ ಶತಕದ ನೆರವಿನಿಂದ ವೆಸ್ಟ್‌ಇಂಡೀಸ್ ವಿರುದ್ಧ ನಿಗದಿತ 50 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 338 ರನ್ ಗಳಿಸಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ
July 24, 2026
5:01 PM
by: ದ ರೂರಲ್ ಮಿರರ್.ಕಾಂ
ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ
July 13, 2026
10:46 PM
by: ದ ರೂರಲ್ ಮಿರರ್.ಕಾಂ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror