ವೃದ್ಧನ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ : ರಾಜ್ಯ ಮಾನವಹಕ್ಕು ಆಯೋಗಕ್ಕೆ ದೂರು

Advertisement

ಕಡಬ: ಕೊಂಬಾರು ನಿವಾಸಿ, ವೃದ್ಧ ರಾಮಣ್ಣ ಗೌಡರ ಮೇಲೆ ಕಡಬ ಪೇಟೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಲಾಠಿಯಿಂದ ಹಲ್ಲೆ ನಡೆಸಿರುವ ಆರೋಪಿ ಪೊಲೀಸ್ ಸಿಬಂದಿಯನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾನವ ಹಕ್ಕುಗಳ ಹೋರಾಟಗಾರ ಉಪ್ಪಿನಂಗಡಿಯ ಪ್ರಶಾಂತ್ ಡಿ’ ಕೋಸ್ತ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.
ಮುಖ್ಯವಾಗಿ ಪೊಲೀಸರು ಯಾರ ಮೇಲೆಯೂ ದೈಹಿಕ ಹಲ್ಲೆ ನಡೆಸುವಂತಿಲ್ಲ. ಆದರೆ ಈ ಪ್ರಕರಣದಲ್ಲಿ ಮಾನಸಿಕವಾಗಿ ನೊಂದಿರುವ ವಯೋವೃದ್ಧ ರಾಮಣ್ಣ ಗೌಡರ ಮೇಲೆ ಜಾತ್ರೆಯ ವೇಳೆ ಸಾರ್ವಜನಿಕರು ಓಡಾಡುತ್ತಿರುವ ರಸ್ತೆಯಲ್ಲಿ ಆರೋಪಿ ಪೊಲೀಸ್ ಸಿಬಂದಿ ಪಂಪಾಪತಿ ಲಾಠಿಯಲ್ಲಿ ಹೊಡೆದು ತೀವ್ರ ತರದ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೇ ಹಲ್ಲೆಗೊಳಗಾಗಿ ಕುಸಿದು ಬಿದ್ದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸದೆ ರಸ್ತೆಯಲ್ಲಿಯೇ ಬಿಟ್ಟು ಹೋಗುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದಾರೆ. ಶಾಂತಿ ಕಾಪಾಡಬೇಕಾಗಿದ್ದ ಪೊಲೀಸರೇ ಈ ರೀತಿ ವರ್ತಿಸಿರುವುದರಿಂದಾಗಿ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಆದುದರಿಂದ ಪ್ರಕರಣದ ಆರೋಪಿ ಪೊಲೀಸ್ ಸಿಬ್ಬಂದಿ ಪಂಪಾಪತಿಯನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.
ಡಾ|ರವೀಂದ್ರನಾಥ ಶಾನುಭಾಗ್ ನೇತೃತ್ವದ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ವೇದಿಕೆಗೂ ಪ್ರಕರಣ ಬಗ್ಗೆ ದೂರು ನೀಡಲಾಗಿದೆ ಎಂದು ಪ್ರಶಾಂತ್ ಡಿ’ ಕೋಸ್ತ ಅವರು ತಿಳಿಸಿದ್ದಾರೆ.

Advertisement

 

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ವೃದ್ಧನ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ : ರಾಜ್ಯ ಮಾನವಹಕ್ಕು ಆಯೋಗಕ್ಕೆ ದೂರು"

Leave a comment

Your email address will not be published.


*