ವೈದ್ಯರ ಮುಷ್ಕರ: ಸುಳ್ಯದಲ್ಲೂ ಖಾಸಗೀ ವೈದ್ಯಕೀಯ ಸೇವೆಗೆ ಅಡಚಣೆ

June 17, 2019
8:55 AM

ಸುಳ್ಯ: ಪಶ್ಚಿಮ ಬಂಗಾಲದಲ್ಲಿ ಕರ್ತವ್ಯನಿರತ ಕಿರಿಯ ವೈದ್ಯರ ಮೇಲೆ ಹಲ್ಲೆ ಖಂಡಿಸಿ, ಭಾರತೀಯ ವೈದ್ಯಕೀಯ ಸಂಘ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸುಳ್ಯದಲ್ಲಿಯೂ ಖಾಸಗೀ ಆಸ್ಪತ್ರೆಗಳ ಸೇವೆಯಲ್ಲಿ ಅಡಚಣೆ ಉಂಟಾಗಲಿದೆ.

Advertisement
Advertisement

ಜೂನ್ 17ರಂದು ಬೆಳಗ್ಗೆ 6 ರಿಂದ ಜೂನ್ 18ರ ಬೆಳಗ್ಗೆ 6 ಗಂ ಖಾಸಗೀ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಲ್ಲಿ ಹೊರ ರೋಗಿ ವಿಭಾಗ ಸೇವೆ  ಸ್ಥಗಿತಗೊಳಿಸಲಾಗುತ್ತಿದೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸಾ ವಿಭಾಗ ಎಂದಿನಂತೆ ಕಾರ್ಯನಿರ್ವಹಿಸಲಿದೆ. ತುರ್ತು ವಿಭಾಗ ಕಾರ್ಯನಿರ್ವಹಿಸುವುದರಿಂದ ಹೆಚ್ಚಿನ ಸಮಸ್ಯೆ ಉಂಟಾಗದು ಎಂದು ಹೇಳಲಾಗಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಅಡಚಣೆ ಆಗದು. ವೈದ್ಯರು, ಶುಶ್ರೂಷಕರು ಎಂದಿನಂತೆ ಕಾರ್ಯನಿರ್ವಹಿಸಲಿದ್ದು ಸರ್ಕಾರಿ ಆಸ್ಪತ್ರೆಗಳಲ್ಲಿ ಅಡಚಣೆಯಾಗದು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ವೈದ್ಯರು, ಸಿಬ್ಬಂದಿ ಹಾಜರಾಗುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ
February 10, 2026
9:55 PM
by: ಮಿರರ್‌ ಡೆಸ್ಕ್
2030 ರೊಳಗೆ 5 ಮಿಲಿಯನ್ ಟನ್ ಹಸಿರು ಹೈಡ್ರೋಜನ್ ಗುರಿ | ರಾಜ್ಯಸಭೆಯಲ್ಲಿ ಕೇಂದ್ರದ ಘೋಷಣೆ
February 10, 2026
6:43 AM
by: ಮಿರರ್‌ ಡೆಸ್ಕ್
ಫೆ.12 ರಿಂದ ಅಂತರಾಷ್ಟ್ರೀಯ ಕಾಫಿ ಉತ್ಸವ | ಜಾಗತಿಕ ಕಾಫಿ ಭೂಪಟದಲ್ಲಿ ಬೆಂಗಳೂರು
February 10, 2026
6:38 AM
by: ಮಿರರ್‌ ಡೆಸ್ಕ್
ಗಡಿಯಲ್ಲೇ ಗಡಿ ಮೀರಿ ಭ್ರಷ್ಟಾಚಾರ ! ಅಡಿಕೆ ಕಳ್ಳಸಾಗಾಟಕ್ಕೆ ಲಂಚ…!?
February 10, 2026
6:03 AM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror