ಸುಳ್ಯ: ಸುಳ್ಯ ಸರ್ವೀಸ್ ಬಸ್ ನಿಲ್ದಾಣದಿಂದ ಖಾಸಗೀ ವ್ಯಾನೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾ ಬೇಲಿಗೆ ಡಿಕ್ಕಿ ಹೊಡೆದ ಘಟನೆ ಗುರುವಾರ ಹಗಲು ಸಂಭವಿಸಿದೆ. ವ್ಯಾನ್ ಡಿಕ್ಕಿ ಹೊಡೆದ ರಭಸಕ್ಕೆ ತಡೆಬೇಲಿ ಅಡ್ಡಲಾಗಿ ಬಿದ್ದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟಿ ಸವಾರ ಗಾಯಗೊಂಡಿದ್ದಾರೆ. ಬಸ್ ನಿಲ್ದಾಣದಿಂದ ಹೊರಡುತ್ತಿದ್ದಂತೆ ವ್ಯಾನ್ ನಿಯಂತ್ರಣ ತಪ್ಪಿ ಚರಂಡಿಯ ಸ್ಲಾಬ್ ಮೇಲೆ ಹತ್ತಿ ತಡೆಬೇಲಿಗೆ ಡಿಕ್ಕಿ ಹೊಡೆದು ನಿಂತಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ಚಿಕಿತ್ಸೆಗಾಗಿ ಸುಳ್ಯ ಸರ್ಕಾರಿ ಅಸ್ಪತ್ರೆಗೆ ಕರೆದೊಯ್ಯಲಾಗಿದೆ. ವ್ಯಾನ್ ಗೆ ಅಲ್ಪ ಸ್ವಲ್ಪ ಹಾನಿ ಸಂಭವಿಸಿದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ವ್ಯಾನ್ ತಡೆಬೇಲಿಗೆ ಡಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಾಯ"