ಅರಂತೋಡು: ಅರಂತೋಡು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಯಶಸ್ವಿನ ಹಾದಿಯಲ್ಲಿ ಶತಮಾನೋತ್ಸವ ಸಂಭ್ರಮದಲ್ಲಿ ಜೂನ್ ತಿಂಗಳಲ್ಲಿನಲ್ಲಿ ನಡೆಯುವ ಎರಡು ದಿನದ ಶತಮಾನೋತ್ಸವ ಕಾರ್ಯಕ್ರಮದ ಯಶಸ್ವಿಗೆ ಎಲ್ಲರು ಸಹಕಾರ ನೀಡಬೇಕೆಂದು ಅರಂತೋಡು-ತೊಡಿಕಾನ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಹೇಳಿದರು.
ಅವರು ಸಹಕಾರಿ ಬ್ಯಾಂಕ್‍ನ ಶತಮಾನೋತ್ಸವ ಕಾರ್ಯಕ್ರಮದ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ದಯಾನಂದ ಕುರುಂಜಿ,ತಾಲೂಕು ಪಂಚಾಯತ್ ಸದಸ್ಯೆ ಪುಷ್ಪಾಮೇದಪ್ಪ, ಗ್ರಾಮ ಪಂಚಾಯತ್ ಅಧ್ಯಕ್ಷೆ ನೀಲಾವತಿ ಕೊಡಂಕೇರಿ, ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಪ್ರಗತಿಪರ ಕೃಷಿಕರಾದ ವಸಂತ ಭಟ್ ದೊಡ್ಡಡ್ಕ, ಜತ್ತಪ್ಪ ಮಾಸ್ತರ್ ಅಳಿಕೆ, ಎ.ವಿ ತೀರ್ಥರಾಮ ಮಾಸ್ತರ್ ಅಡ್ಕಬಳೆ, ಕಿಶೋರ್ ಕುಮಾರ್ ಉಳುವಾರು, ವಿಜೇತ್ ಮರುವಳ, ನಾರಾಯಣ ನಾಗನಮೂಲೆ, ಕುಸುಮಾಧರ ಅಡ್ಕಬಳೆ , ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಾಸುದೇವ ನಾಯಕ್ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಶತಮಾನೋತ್ಸವ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ : ಸಂತೋಷ್ ಕುತ್ತಮೊಟ್ಟೆ"