ಶಬರಿಮಲೆಗೆ ತೆರಳುವ ಭಕ್ತರ ಸಂಖ್ಯೆ ಹೆಚ್ಚಳ : ದಿನದ ಕಾಣಿಕೆ ಸಂಗ್ರಹ 3 ಕೋಟಿಗೂ ಅಧಿಕ…!

November 19, 2019
12:38 PM

ಶಬರಿಮಲೆ: ದೇಶದ ಭಕ್ತರ ನಂಬಿಕೆಯ, ಶ್ರದ್ಧೆಯ ತಾಣವಾದ ಶಬರಿಮಲೆ ಯಾತ್ರೆಗೆ ಈಗ ಭಕ್ತರ ಸಂಖ್ಯೆ ಹೆಚ್ಚಿದೆ. ಕಳೆದ ವರ್ಷ ಮಹಿಳಾ ಪ್ರವೇಶದ ವಿವಾದದ ಕಾರಣದಿಂದ ಸಂಕಲ್ಪ ಕೈಗೊಂಡು ಯಾತ್ರೆ ಮಾಡಲಾಗದ ಭಕ್ತರು ತಮ್ಮ ಶ್ರದ್ಧೆ, ನಂಬಿಕೆಯ ತಾಣಕ್ಕೆ ಈಗ ಭೇಟಿಗೆ ಆರಂಭಿಸಿದ್ದಾರೆ. ಹೀಗಾಗಿ ದೇವಳದ ಆದಾಯವೂ ಹೆಚ್ಚಿದ್ದು ದಿನಕ್ಕೆ 3.30 ಕೋಟಿ ರೂಪಾಯಿಗೂ ಅಧಿಕ ಕಾಣಿಕೆ ಸಂಗ್ರಹವಾಗುತ್ತಿದೆ. ಶನಿವಾರ ಮಂಡಲ ಪೂಜೆಗಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ತೆರೆಯಲಾಗಿತ್ತು. ಆ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶಬರಿಮಲೆಗೆ ಆಗಮಿಸಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ.

ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಎನ್​. ವಾಸು ಮಾಹಿತಿ ನೀಡಿ, “ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಮೊದಲ ದಿನ ಕಾಣಿಕೆ ರೂಪದಲ್ಲಿ 3.32 ಕೋಟಿ ಆದಾಯ ದೇಗುಲಕ್ಕೆ  ಬಂದಿದೆ. ಕಳೆದ ವರ್ಷ  2.04 ಕೋಟಿ ಆದಾಯ ಸಂಗ್ರಹವಾಗಿತ್ತು ಎಂದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಸಂಗ್ರಹವಾಗಿರುವ ಆದಾಯ ಶೇ.50ರಷ್ಟು ಹೆಚ್ಚಾಗಿದೆ. ಈ ವರ್ಷ ತೀರ್ಥಯಾತ್ರೆಯು ಉತ್ತಮವಾಗಿ ನಡೆಯುತ್ತಿದೆ ಎಂದು ಹೇಳಿದರು. ಭಕ್ತಾದಿಗಳಿಗೆ ಹೆಚ್ಚಿನ ವ್ಯವಸ್ಥೆ ಮಾಡಲು ದೇವಸ್ವಂ ಬೋರ್ಡ್ ಪ್ರಯತ್ನ ಮಾಡುತ್ತಿದೆ ಎಂದರು.

ಕಳೆದ ವರ್ಷ ಮಹಿಳೆಯರು ದೇವಾಲಯಕ್ಕೆ ಪ್ರವೇಶಿಸಲು ಅವಕಾಶ ನೀಡುವ ಸುಪ್ರೀಂ ಕೋರ್ಟ್​​ ತೀರ್ಪನ್ನು ರಾಜ್ಯ ಸರಕಾರ ಜಾರಿಗೆ ತಂದಿತ್ತು. ಇದನ್ನು ವಿರೋಧಿಸಿ   ಪ್ರತಿಭಟನೆಗಳು ನಡೆದಿದ್ದವು. ಆದರೆ ಈ ವರ್ಷ ಮಹಿಳೆಯರಿಗೆ ಯಾವುದೇ ನಿರ್ಬಂಧ ಇಲ್ಲದ ಕಾರಣ ವಿವಾದಗಳಿಲ್ಲದೆ ಯಾತ್ರೆ ನಡೆಯುತ್ತಿದೆ.

( ಮೂಲ: ಸುದ್ದಿ ಜಾಲ)

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror