ಶಾಲೆ ಪ್ರಾರಂಭದ ಬಗ್ಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್‌ ಕುಮಾರ್

August 13, 2020
6:31 PM

‌ಮಂಡ್ಯ: ಕೊರೋನಾ ಭೀತಿ ನಡುವೆಯೂ  ರಾಜ್ಯದಲ್ಲಿ ಸೆಪ್ಟೆಂಬರ್​​​​​​ನಿಂದ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ, ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಗೊಂದಲಗಳು ಸಹ ಮೂಡಿವೆ. ಆದರೆ ಯಾವುದೇ ಕಾರಣಕ್ಕೂ ಸೆಪ್ಟೆಂಬರ್ ನಿಂದ ರಾಜ್ಯದಲ್ಲಿ ಶಾಲೆಗಳು ಪ್ರಾರಂಭಿಸಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್​ ಕುಮಾರ್​ ಸ್ಪಷ್ಟನೆ ನೀಡಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಬಹು ಮುಖ್ಯ ಆದ್ಯತೆ ಅಂದರೆ ಅದು ನಮ್ಮ ಮಕ್ಕಳ ಆರೋಗ್ಯ. ಈಗ ನಮ್ಮ ಮುಂದೆ ದೊಡ್ಡ ಸವಾಲು ಇದೆ.  ಮುಂದಿನ ಶೈಕ್ಷಣಿಕ ದಿನಗಳು ಹೇಗೆ ಎಂದು ಯೋಚನೆ ಮಾಡುವಂತಾಗಿದೆ. ಸುರೇಶ್ ಕುಮಾರ್ ಶಾಲೆ ಪ್ರಾರಂಭ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂಬುದನ್ನೂ ಹೇಳುತ್ತಿದ್ದಾರೆ. ಖಂಡಿತ ಯಾವುದೇ ಕಾರಣಕ್ಕೂ  ಸೆಪ್ಟೆಂಬರ್​ನಿಂದ ಶಾಲೆಗಳನ್ನು ಪ್ರಾರಂಭಿಸಲ್ಲ ಎಂದು ಸಚಿವ ಸುರೇಶ್​ ಕುಮಾರ್​ ಸ್ಪಷ್ಟಪಡಿಸಿದ್ದಾರೆ.

ಕೊರೋನಾ ಕಾಲದಲ್ಲಿ ನಮ್ಮ ಮಕ್ಕಳು ಯಾವುದೇ ಕಾರಣಕ್ಕೂ ಕೊರೋನಾ ಭೀತಿಗೆ ಒಳಗಾಗಬಾರದು. ಶಿಕ್ಷಕರು ಮಕ್ಕಳು ಇರುವ ಕಡೆ ಹೋಗಿ ಮಕ್ಕಳ ಕಲಿಕೆಗೆ ಪ್ರೋತ್ಸಾಹ ಕೊಟ್ಟು ಕಲಿಸುತ್ತಿದ್ದಾರೆ. ಇನ್ನು ಈಗಾಗಲೇ ಎಲ್ಲರ ಮನೆಗೆ ಪಠ್ಯ ಪುಸ್ತಕ ತಲುಪಿಸಿದ್ದೇವೆ. ಟಿವಿಯಲ್ಲಿ ಸೇತುಬಂಧ ಕಾರ್ಯಕ್ರಮ ಮಾಡ್ತಿದ್ದೇವೆ. ಶಿಕ್ಷಣ ಇಲಾಖೆಯಿಂದ ಎರಡು ಚಾನಲ್​ಗಳನ್ನು ಪ್ರಾರಂಭಿಸುತ್ತಿದ್ದೇವೆ. ಎಲ್ಲಾ ತರಗತಿಗಳಿಗೆ ಪಾಠ ಮಾಡಲು ಸಿದ್ದತೆ ನಡೆದಿದೆ, ಪಠ್ಯಕ್ರಮ ಕೂಡ ಸಿದ್ಧವಾಗಿದೆ. ಶಿಕ್ಷಣ ಇಲಾಖೆಯಿಂದ ಸಮಾಜಕ್ಕೆ ಭರವಸೆ ನೀಡುವ ಕಾರ್ಯವಾಗ್ತಿದೆ ಎಂದು ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ
August 9, 2026
6:28 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ
August 8, 2026
7:54 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror