ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು – ವೆಂಕಟ್ ದಂಬೆಕೋಡಿ

July 28, 2019
4:27 PM

ಸುಳ್ಯ:ನಿಷ್ಕಳಂಕ ವ್ಯಕ್ತಿತ್ವದ ಹಾಗೂ 25 ವರ್ಷಗಳಿಂದ ಸುಳ್ಯ ಶಾಸಕರಾಗಿರುವ ಅಂಗಾರ ಅವರಿಗೆ ಬಿಜೆಪಿ ಸರಕಾರದಲ್ಲಿ ಸಚಿವ ಸ್ಥಾನ ಸಿಗುವಂತಾಗಬೇಕು ಎಂದು ಮಂಡಲ ಮಾಜಿ ಅಧ್ಯಕ್ಷ , ಜಿಪಂ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ತನ್ನ ಆಶಯ ವ್ಯಕ್ತಪಡಿಸಿದ್ದಾರೆ.

ಸುಳ್ಯ ಪತ್ರಕರ್ತರಿಗೆ ಪತ್ರಿಕಾ ಹೇಳಿಕೆ ನೀಡಿರುವ ವೆಂಕಟ್ ದಂಬೆಕೋಡಿ ಅವರು, ಜಿಲ್ಲೆಯಲ್ಲಿ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕೋ ಬೇಡವೋ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಳೆದ 25 ವರ್ಷಗಳಿಂದ ಶಾಸಕರಾಗಿರುವ ಅಂಗಾರ ಅವರು ಸಚ್ಚಾರಿತ್ರ್ಯದ ರಾಜಕಾರಣಿಯಾಗಿ ,  ಭ್ರಷ್ಟಾಚಾರ ಸೇರಿದಂತೆ ಯಾವುದೇ ಆರೋಪ ಇಲ್ಲದೆಯೇ ಕೆಲಸ ಮಾಡಿದ್ದಾರೆ. ಈ ಹಿಂದಿನ ವಿದ್ಯಮಾನ ಗಮನಿಸಿದರೆ ಒಂದು ಬಾರಿ ಶಾಸಕರಾದವರಿಗೆ ಸಚಿವ ಸ್ಥಾನ ಸಿಗುತ್ತದೆ, 25 ವರ್ಷಗಳಿಂದ ಸುಳ್ಯ ಕ್ಷೇತ್ರ ಪ್ರತಿನಿಧಿಸುತ್ತಿರುವ ಅಂಗಾರ ಅವರಿಗೆ  ಅರ್ಹವಾಗಿಯೇ  ಸಚಿವ ಸ್ಥಾನ ಸಿಗಬೇಕು ಎಂಬುದು ನನ್ನ ಆಶಯವಾಗಿದೆ ಎಂದು ವೆಂಕಟ್ ದಂಬೆಕೋಡಿ ಪತ್ರಿಕಾ ಹೇಳಿಕೆಯಲ್ಲಿ  ತಿಳಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror