ಶಿರಾಡಿ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿರಾಡಿಯಲ್ಲಿ ಮಂಗಳವಾರ ನಡೆದ ಅಪಘಾತದಲ್ಲಿ ಕಾರು ಉರುಳಿ ಕಂದಕಕ್ಕೆ ಬಿದ್ದು, ಬೆಂಗಳೂರು ನಿವಾಸಿ ಸುನಿಲ್ ಎಂಬವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
ಬೆಂಗಳೂರು ಮೂಲದ ತಂಡ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದ ಸಂದರ್ಭ ಮಂಗಳವಾರ ಮಧ್ಯಾಹ್ನ ಕಾರು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳಕ್ಕೆ ಉರುಳಿದೆ. ಈ ಸಂದರ್ಭ ಕಾರು ಸಂಪೂರ್ಣ ನಜ್ಜುಗುಜ್ಜಾಗಿತ್ತು. ಅತ್ಯಂತ ಅಪಾಯಕಾರಿಯಾಗುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಅಕ್ಕಪಕ್ಕ ಕೆಲಸ ನಡೆಯುತ್ತಿರುವ ಜಾಗದಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು, ಚಾಲಕರೂ ಅತಿವೇಗದಲ್ಲಿ ಹೋಗಬಾರದು ಎಂದು ಸಾರ್ವಜನಿಕರು ಹೇಳುತ್ತಿದ್ದರೂ, ಯಾರೂ ಕ್ಯಾರೆನ್ನುತ್ತಿಲ್ಲ. ಅಷ್ಟೇ ಅಲ್ಲ, ಈ ಜಾಗದಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಗುಂಡಿ ತೋಡಲಾಗಿದ್ದು, ಬೈಕ್ ಸವಾರನೊಬ್ಬ ಇಲ್ಲೇ ಬಿದ್ದು ಗಾಯಗೊಂಡಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement