ಕೊರೋನಾ ಎಫೆಕ್ಟ್: ಕುಸಿದ ಷೇರುಮಾರುಕಟ್ಟೆ: 5 ನಿಮಿಷದಲ್ಲಿ 5 ಲಕ್ಷ ಕೋಟಿ ರೂ ನಷ್ಟ

February 28, 2020
12:07 PM

ಮುಂಬೈ: ಚೀನಾ ಸೇರಿದಂತೆ ವಿಶ್ವದ ನಾನಾ ದೇಶಗಳಲ್ಲಿ ಮರಣ ಭೀತಿ ಸೃಷ್ಟಿಸಿರುವ ಕೊರೋನಾ ವೈರಸ್ ಎಫೆಕ್ಟ್ ಭಾರತೀಯ ಷೇರುಮಾರುಕಟ್ಟೆ ಮೇಲೂ ಆಗಿದ್ದು, ಕೇವಲ 5 ನಿಮಿಷಗಳ ಅಂತರದಲ್ಲಿ ಹೂಡಿಕೆದಾರರು 5 ಲಕ್ಷ ಕೋಟಿ ರೂ ನಷ್ಟ ಅನುಭವಿಸಿದ್ದಾರೆ.

ಕೊರೋನಾ ವೈರಸ್ ಭೀತಿ ಉತ್ಪಾದನಾ ವಲಯದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಇದರ ದುಷ್ಪರಿಣಾಮ ಇದೀಗ ಭಾರತೀಯ ಷೇರುಮಾರುಕಟ್ಟೆ ಮೇಲೂ ಆಗಿದೆ. ಆರಂಭಿಕ ವಹಿವಾಟಿನಲ್ಲಿಯೇ  ಸೆನ್ಸೆಕ್ಸ್ 1,155 ಅಂಕ ಕುಸಿತ ಕಂಡಿದ್ದು, ನಿಫ್ಟಿಯು ಕೂಡ 346 ಅಂಕ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಷೇರುಗಳ ಮೌಲ್ಯದಲ್ಲಿ ಭಾರೀ ಇಳಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ಈ ದಿಢೀರ್ ನಕಾರಾತ್ಮಕ ಬೆಳವಣಿಗೆಯಿಂದಾಗಿ ಹೂಡಿಕೆದಾರರು  5 ಲಕ್ಷ ಕೋಟಿ ರೂಗಳ ನಷ್ಟ ಅನುಭವಿಸುವಂತಾಗಿದೆ.

ಷೇರು ಕುಸಿತ ಬ್ಯಾಂಕಿಂಗ್‌, ಆಟೋಮೊಬೈಲ್‌, ಲೋಹ, ತೈಲ ಮತ್ತು ಅನಿಲ ಕಂಪನಿಗಳ ಮೇಲೆ ನಕರಾತ್ಮಕ ಪ್ರಭಾವ ಬೀರಿದ್ದು, ಕಂಪನಿಗಳ ಷೇರು ಮೌಲ್ಯದಲ್ಲಿ ಭಾರಿ ಕುಸಿತ ಕಂಡು ಬಂದಿದೆ. ಷೇರು ಹೂಡಿಕೆದಾರರು ಹಾಗೂ ಕಂಪನಿಗಳು ಭಾರಿ ಪ್ರಮಾಣದ ನಷ್ಟ ಅನುಭವಿಸಿವೆ.

ಷೇರು ಮಾರುಕಟ್ಟೆ ಕುಸಿತದಿಂದ ರೂಪಾಯಿ ಮೌಲ್ಯದಲ್ಲೂ ಕೂಡ ಇಳಿಕೆ ಕಂಡುಬಂದಿದೆ. 33 ಪೈಸೆ ಇಳಿಕೆ ಕಂಡಿರುವ ರೂಪಾಯಿ ಮೌಲ್ಯ ಸದ್ಯಕ್ಕೆ ಅಮೆರಿಕ ಡಾಲರ್‌ ಎದುರು 71.94 ರೂ. ಇದೆ.

ಇಂದಿನ ವಹಿವಾಟಿನಲ್ಲಿ ಟಾಟಾ ಸ್ಟೀಲ್, ಟೆಕ್ ಮಹೀಂದ್ರಾ, ಇನ್ಫೋಸಿಸ್, ಮಹೀಂದ್ರಾ ಮತ್ತು ಮಹೀಂದ್ರಾ, ಬಜಾಜ್ ಫೈನಾನ್ಸ್, ಎಚ್‌ಸಿಎಲ್ ಟೆಕ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಗಳು ಭಾರಿ ನಷ್ಟ ಅನುಭವಿಸಿದ್ದು, ಈ ಸಂಸ್ಥೆಗಳ ಷೇರುಮೌಲ್ಯದಲ್ಲಿ ಕುಸಿತ ಕಂಡುಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror