ಸವಣೂರು: ಎಸ್ಸೆಸೆಲ್ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಹಿನ್ನೆಲೆಯಲ್ಲಿ ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸರಕಾರಿ ಪ್ರೌಢಶಾಲೆಯ ಪರವಾಗಿ ಶಾಲಾ ಮುಖ್ಯಗುರು ಯಶೋಧಾ ಅವರನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಆಯೋಜಿಸಲಾದ ಪುಸ್ತಕ ಮೇಳ, ಸಾಹಿತ್ಯ ಉತ್ಸವ ಕಾರ್ಯಕ್ರಮದಲ್ಲಿ ಗೌರವಿಸಿ ಸಮ್ಮಾನಿಸಲಾಯಿತು.
ಈ ಸಂದರ್ಭ ಪುತ್ತೂರು ಶಾಸಕ ಸಂಜೀವ ಮಠಂದೂರು ,ಮಂಗಳೂರು ಆಕಾಶವಾಣಿ ನಿರ್ದೇಶಕಿ ಉಷಾಲತಾ ಸರಪಾಡಿ,ಬೆಟ್ಟಂಪಾಡಿ ಸ. ಪ್ರ. ದ. ಕಾಲೇಜಿನ ಪ್ರಾಂಶುಪಾಲ ಡಾ| ವರದರಾಜ ಚಂದ್ರಗಿರಿ, ಕ.ಸಾ.ಪ. ಪುತ್ತೂರು ಘಟಕದ ಗೌರವ ಕೋಶಾಧ್ಯಕ್ಷ ಎನ್.ಕೆ. ಜಗನ್ನಿವಾಸ್ ರಾವ್, ಘಟಕದ ಅಧ್ಯಕ್ಷ ಐತಪ್ಪ ನಾಯ್ಕ್ , ಕ.ಸಾ.ಪ. ಘಟಕದ ಗೌರವ ಕಾರ್ಯದರ್ಶಿ ಸರೋಜಿನಿ ಮೇನಾಲ ಘಟಕದ ಗೌರವ ಕಾರ್ಯದರ್ಶಿ ಡಾ| ಎಚ್.ಜಿ. ಶ್ರೀಧರ್ , ವೇದಿಕೆಯಲ್ಲಿ ಮೊದಲಾದವರು ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಸರಕಾರಿ ಶಾಲೆಗೆ ಶೇ.100 ಫಲಿತಾಂಶ : ಕ.ಸಾ.ಪ.ದಿಂದ ಅಭಿನಂದನೆ"