ಸವಣೂರು : ಉಚಿತ ನೇತ್ರ ಚಿಕಿತ್ಸಾ ಶಿಬಿರ: ಸಮಾಜದ ಬೆಳವಣಿಗೆಯಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ವದ್ದು – ಗಣೇಶ್ ನಿಡ್ವಣ್ಣಾಯ

September 28, 2019
2:45 PM

ಸವಣೂರು: ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ, ಜನಜಾಗೃತಿ ವೇದಿಕೆ ಸವಣೂರು ವಲಯ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘನ, ಹಾಲು ಉತ್ಪಾದಕರ ಸಹಕಾರ ಸಂಘದ ಸವಣೂರು ಇವರ ಪ್ರಾಯೋಜಕತ್ವದಲ್ಲಿ ದ.ಕ.ಜಿಲ್ಲಾ ಅಂಧತ್ವ ಹತೋಟಿ ಸಂಸ್ಥೆ ಮಂಗಳೂರು, ಜಿಲ್ಲಾ ವೆನ್‍ಲಾಕ್ ಸಂಚಾರಿ ನೇತ್ರಾ ಚಿಕಿತ್ಸಾ ಘಟಕ ಮತ್ತು ಕೆಎಂಸಿ ಮಂಗಳೂರು ಇದರ ತಜ್ಞ ವೈದ್ಯರ ತಂಡದಿಂದ ಉಚಿತ ಕಣ್ಣಿನ ಚಿಕಿತ್ಸಾ ಶಿಬಿರ ಸೆ.27ರಂದು ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ನಡೆಯಿತು.

Advertisement

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸವಣೂರು ಯುವಕ ಮಂಡಲ ಹಾಗೂ ಇತರ ಸಂಘ ಸಂಸ್ಥೆಗಳಿಂದ ನಿರಂತರವಾಗಿ ಸಾಮಾಜಿಕ ಚಟುವಟಿಕೆಗಳು ನಡೆಯುತ್ತಿದೆ. ಸಮಾಜದ ಬೆಳವಣಿಗೆಯಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ವದ್ದು ಎಂದರು.
ದ.ಕ.ಜಿಲ್ಲಾ ಅಂಧತ್ವ ಹತೋಟಿ ಸಂಸ್ಥೆ ಮಂಗಳೂರು, ಜಿಲ್ಲಾ ವೆನ್‍ಲಾಕ್ ಸಂಚಾರಿ ನೇತ್ರಾ ಚಿಕಿತ್ಸಾ ಘಟಕದ ಅಧೀಕ್ಷಕ ಡಾ.ಅನಿಲ್ , ಕೆಎಂಸಿ ಮಂಗಳೂರು ಇದರ ಡಾ.ಅವಿನಾಶ್ ಅವರು ಕಣ್ಣಿನ ತಪಾಸಣೆ ಹಾಗೂ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.

ಜನಜಾಗೃತಿ ವೇದಿಕೆ ಸವಣೂರು ವಲಯದ ಅಧ್ಯಕ್ಷ ಮಹೇಶ್ ಕೆ.ಸವಣೂರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ರಾಜ್ಯ ಯುವ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ನಿರ್ದೇಶಕರಾದ ತನಿಯಪ್ಪ ನಾಯ್ಕ ಕಾರ್ಲಾಡಿ, ಸೋಮನಾಥ ಕನ್ಯಾಮಂಗಲ, ತಿಮ್ಮಪ್ಪ ಗೌಡ ಮುಂಡಾಳ, ಚೇತನ್ ಕುಮಾರ್ ಕೋಡಿಬೈಲು, ವೇದಾವತಿ ಕೆಡೆಂಜಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರ ಶೇಖರ್ ಪಿ, ಜನಜಾಗೃತಿ ವೇದಿಕೆಯ ಸದಸ್ಯರಾದ ವೇಣುಗೋಪಾಲ ಕಳುವಾಜೆ, ಯುವಕ ಮಂಡಲದ ಮಾಜಿ ಅಧ್ಯಕ್ಷ ದಯಾನಂದ ಮೆದು, ಉಪಾಧ್ಯಕ್ಷ ಕುಲಪ್ರಕಾಶ್ ಮೆದು ಮೊದಲಾದವರಿದ್ದರು.

ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ರಾಕೇಶ್ ರೈ ಕೆಡೆಂಜಿ, ಸಚಿನ್ ಭಂಡಾರಿ, ಕಾರ್ಯದರ್ಶಿ ಪ್ರವೀಣ್ ಚೆನ್ನಾವರ, ಗ್ರಾ.ಪಂ.ಸದಸ್ಯ ಸತೀಶ್ ಬಲ್ಯಾಯ, ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಭವ್ಯಾ, ಸಿಬಂದಿ ರಮೇಶ್ ಪಂಚೋಡಿ ಸಹಕರಿಸಿದರು.

209 ಮಂದಿಯ ತಪಾಸಣೆ,136 ಮಂದಿಗೆ ಕನ್ನಡಕ ವಿತರಣೆ: ನೇತ್ರ ಚಿಕಿತ್ಸಾ ಶಿಬಿರದಲ್ಲಿ 209 ಮಂದಿಯ ತಪಾಸಣೆ ನಡೆಸಲಾಗಿದ್ದು, 136 ಮಂದಿಗೆ ಕನ್ನಡಕ ವಿತರಿಸಲಾಯಿತು. 5 ಮಂದಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಿಕೊಡಲಾಯಿತು.
ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು ಸ್ವಾಗತಿಸಿ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಿ.ಸುಪ್ರಿತ್ ರೈ ಖಂಡಿಗ ವಂದಿಸಿದರು. ಕಾರ್ಯಕ್ರಮ ಸಂಯೋಜಕ ಗಿರಿಶಂಕರ ಸುಲಾಯ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
July 16, 2025
7:51 AM
by: ದ ರೂರಲ್ ಮಿರರ್.ಕಾಂ
ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ
July 16, 2025
7:17 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group