ಸಾರ್ವಜನಿಕರಿಗೂ ಮೀಡಿಯಾ ಹೆಲ್ತ್ ಕ್ಲಿನಿಕ್ ನಲ್ಲಿ ಉಚಿತ ಅರೋಗ್ಯ ತಪಾಸಣೆ ಉದ್ಘಾಟನೆ

November 19, 2019
7:13 PM

ಮಂಗಳೂರು: ‘ಆರೋಗ್ಯವೇ ಭಾಗ್ಯ’ ನಾಣ್ನುಡಿಯಂತೆ ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯ. ಆರೋಗ್ಯ ಸುದೃಢವಾಗಿದ್ದಾಗ ಸುಸ್ಥಿರ ಕುಟುಂಬ, ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಎ.ಜೆ. ಆಸ್ಪತ್ರೆ ಸಾಮಾಜಿಕ ಕಳಕಳಿಯೊಂದಿಗೆ ವಿಶೇಷ ಸೇವೆ ನೀಡುತ್ತಾ ಬರುತ್ತಿದೆ ಎಂದು ಲಕ್ಷ್ಮೀ ಮೆಮೊರಿಯಲ್ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಹೇಳಿದರು.

Advertisement
Advertisement

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸಾರ್ವಜನಿಕರಿಗೂ ಮೀಡಿಯಾ ಹೆಲ್ತ್ ಕ್ಲಿನಿಕ್‌ನಲ್ಲಿ ಉಚಿತ ಆರೋಗ್ಯ ತಪಾಸಣೆ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಕರ್ತರು ಸೇರಿದಂತೆ ಎಲ್ಲರೂ ತಮ್ಮ ಒತ್ತಡ ಕೆಲಸದಿಂದ ಆರೋಗ್ಯವನ್ನು ಕಡೆಗಣಿಸುತ್ತಿದ್ದಾರೆ. ಮನೆಯಲ್ಲಿ ಯಾವುದೇ ವ್ಯಕ್ತಿಯ ಆರೋಗ್ಯ ಕೆಟ್ಟಾಗ ಇಡೀ ಕುಟುಂಬ ನೆಮ್ಮದಿ ಕಳೆದುಕೊಳ್ಳುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

Advertisement

ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕಷ್ಣ ರಾವ್ ಮಾತನಾಡಿ, ಪ್ರತಿಯೊಬ್ಬರು ತಮ್ಮ ಆರೋಗ್ಯ ಕಾಳಜಿವಹಿಸಿ ಕನಿಷ್ಠ 6 ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಬೆಳೆಸಿಕೊಳ್ಳಬೇಕು. ಇದರಿಂದ ಯಾವುದೇ ಬಾಧೆಯನ್ನು ತಡೆಗಟ್ಟಲು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು ಹೆಚ್ಚು ಪೂರಕ, ಅಗತ್ಯವೂ ಹೌದು ಎಂದರು. ಮುಖ್ಯ ಅತಿಥಿಗಳಾಗಿ ಎ.ಜೆ. ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಡೀನ್ ಡಾ. ಅಶೋಕ್ ಹೆಗ್ಡೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಭಾಗವಹಿಸಿದ್ದರು.

ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಕರ್ತ ಹಿಲರಿ ಕ್ರಾಸ್ತ ವಂದಿಸಿದರು. ಜೀತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿದರು.

Advertisement

ಪ್ರತಿ ತಿಂಗಳು ಉಚಿತ ತಪಾಸಣೆ:
ನಗರದ ಲೇಹಿಹಿಲ್‌ನಲ್ಲಿರುವ ಪ್ರೆಸ್‌ಕ್ಲಬ್‌ನಲ್ಲಿ ಪ್ರತಿ ತಿಂಗಳ ಎರಡನೇ ಮಂಗಳವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ಮೀಡಿಯಾ ಹೆಲ್ತ್ ಕ್ಲಿನಿಕ್‌ನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ಇದರಲ್ಲಿ ಪತ್ರಕರ್ತರು, ಅವರ ಕುಟುಂಬಿಕರು ಹಾಗೂ ಸಾರ್ವಜನಿಕರು ಸೌಲಭ್ಯ ಪಡೆದುಕೊಳ್ಳಬಹುದು ಎಂದು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹೇಳಿದರು. ಮಂಗಳವಾರ ಮಣ್ಣಗುಡ್ಡ ಗಾಂಧಿನಗರ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |
September 28, 2024
8:39 PM
by: ದ ರೂರಲ್ ಮಿರರ್.ಕಾಂ
ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ |ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್
September 28, 2024
7:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಚರ್ಚೆಯಾಗುತ್ತಿದ್ದಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | ಅಸ್ಸಾಂ ಗಡಿಯಲ್ಲಿ 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |
September 28, 2024
7:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28.09.2024 | ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ
September 28, 2024
12:16 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror