ಸಿದ್ಧಲಿಂಗಪುರದಲ್ಲಿ ಚಿರತೆ ದಾಳಿ : ಆಡು, ನಾಯಿ ಬಲಿ

June 25, 2019
9:30 AM

ಮಡಿಕೇರಿ  : ಕೊಟ್ಟಿಗೆಯೊಳಗಿದ್ದ ಆಡು ಮತ್ತು ಮನೆಯ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಚಿರತೆಯೊಂದು ಭಕ್ಷಿಸಿರುವ ಘಟನೆ ಕುಶಾಲನಗರ ಸಮೀಪದ ಸಿದ್ಧಲಿಂಗಪುರದಲ್ಲಿ ನಡೆದಿದೆ.
ಸಿದ್ಧಲಿಂಗಪುರ ಮತ್ತು ಅಳಿಲುಗುಪ್ಪೆ ವ್ಯಾಪ್ತಿಯಲ್ಲಿ ಚಿರತೆ ಓಡಾಡುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಅಳಿಲುಗುಪ್ಪೆಯ ಲೋಕೇಶ್ ಎಂಬವರ ಮನೆಯ ಮುಂದೆ ರಾತ್ರಿ ಕಟ್ಟಿದ್ದ ನಾಯಿಯನ್ನು ಚಿರತೆ ಭಕ್ಷಿಸಿದೆ.
ಕೊಡಗಿನ ಗಡಿಭಾಗದ ಮರಿಯಾನಗರಕ್ಕೆ ಹೊಂದಿಕೊಂಡಂತಿರುವ ಚಿಮ್ಮಿಯಣ್ಣ ಎಂಬವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಆಡನ್ನು ಎಳೆದ ತಿಂದಿದೆ. ಚಿರತೆಯನ್ನು ಪ್ರತ್ಯಕ್ಷವಾಗಿ ನೋಡಿರುವ ತೋಟದ ಕಾರ್ಮಿಕರು ಕಾಡಿನಂಚಿನ ಜಮೀನುಗಳಲ್ಲಿ ಕೆಲಸ ನಿರ್ವಹಿಸಲು ಹಿಂಜರಿಯುತ್ತಿದ್ದಾರೆ.
ಹಾಸನ ಮತ್ತು ಕೊಡಗು ಜಿಲ್ಲೆಯ ಗಡಿಭಾಗವಾಗಿರುವ ಈ ಪ್ರದೇಶದಲ್ಲಿ ಈಗಾಗಲೇ ಹಾಸನದ ಅರಣ್ಯಾಧಿಕಾರಿಗಳು ಚಿರತೆ ಸೆರೆಗೆ ಬೋನ್‍ನ್ನು ತಂದು ಇರಿಸಿದ್ದಾರೆಯಾದರು ಚಿರತೆ ತಮ್ಮ ಮೇಲೆರಗಬಹುದು ಎನ್ನುವ ಭೀತಿಯಲ್ಲೇ ಗ್ರಾಮಸ್ಥರು ದಿನದೂಡುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror