ಸುಬ್ರಹ್ಮಣ್ಯ:ಕೆ.ಎಸ್.ಎಸ್ ಕಾಲೇಜಿನಲ್ಲಿ ವನಮಹೋತ್ಸವ ಆಚರಣೆ

July 20, 2019
11:00 AM

ಸುಬ್ರಹ್ಮಣ್ಯ: ಸಕಲ ಜೀವರಾಶಿಗಳಿಗೂ ಗಾಳಿ, ನೀರು, ಆಹಾರ ಮುಖ್ಯ. ಹೀಗಾಗಿ ಪರಿಸರ ಸಂರಕ್ಷಣೆ ಅವಶ್ಯಕ. ಉಸಿರು ನೀಡುವ ಮರಗಳನ್ನು ರಕ್ಷಿಸುವುದು ನಮ್ಮ ಹೊಣೆ ಎಂದು ವನ್ಯಜೀವಿ ತಜ್ಞ ಭುವನೇಶ್ ಕೈಕಂಬ ಹೇಳಿದರು.
ಕೆ.ಎಸ್.ಎಸ್ ಕಾಲೇಜಿನ ಎನ್.ಎಸ್.ಎಸ್ ಹಾಗೂ ಯೂತ್ ರೆಡ್‍ಕ್ರಾಸ್ ಘಟಕಗಳು ಜೊತೆಗೂಡಿ ಶುಕ್ರವಾರ ಕಾಲೇಜಿನಲ್ಲಿ ಆಯೋಜಿಸಿದ ವನಮಹೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಗಳಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಹಾವಿದ್ಯಾಲಯದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮೋಹನ್ ದಾಸ್ ರೈ ಅವರು ತ್ಯಾಜ್ಯ ಸಂಸ್ಕರಿಸುವ ಕೊಳವೆಯ ಬಗ್ಗೆ ಮಾಹಿತಿ ನೀಡಿದರು. ಅರಣ್ಯ ಇಲಾಖೆಯ ಅಧಿಕಾರಿ ಕರಣೀಮಠ್ ಮುಖ್ಯ ಅತಿಥಿಯಾಗಿ ವೇದಿಕೆಯಲ್ಲಿದ್ದ್ರರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವಹಿಸಿದ್ದರು.
ವೇದಿಕೆಯಲ್ಲಿ ಎನ್.ಎಸ್.ಎಸ್ ಯೋಜನಾಧಿಕಾರಿಗಳಾದ ರಮಾನಾಥ್, ಶಿವಪ್ರಸಾದ್ ಹಾಗೂ ಯೂತ್ ರೆಸ್‍ಕ್ರಾಸ್ ಅಧಿಕಾರಿಗಳಾದ ಮಧುರಾ ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಪ್ರೋ. ಉದಯಕುಮಾರ್ ಕೆ ಸ್ವಾಗತಿಸಿ, ಎನ್.ಎಸ್.ಎಸ್ ಯೋಜನಾಧಿಕಾರಿ ಶಿವಪ್ರಸಾದ್ ವಂದಿಸಿದರು. ಲೋಹಿತ್ ಎಂ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿದೇಶಿ ಅಡಿಕೆ ಶಂಕೆ – ತೆರಿಗೆ ವಂಚನೆ ವಿವಾದ | ವಶಪಡಿಸಿಕೊಂಡ 380 ಚೀಲ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಣೆ
May 28, 2026
11:16 PM
by: ಮಿರರ್‌ ಡೆಸ್ಕ್
ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ
May 28, 2026
7:20 AM
by: ದ ರೂರಲ್ ಮಿರರ್.ಕಾಂ
ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!
May 27, 2026
8:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror