ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಹಿತರಕ್ಷಣಾ ಸಮಿತಿ ಸಭೆ ಶುಕ್ರವಾರ ನಡೆಯಿತು. ಈ ಸಭೆಯಲ್ಲಿ ಉಡುಪಿನಲ್ಲಿ ನಡೆದ ಮಾತುಕತೆಯ ಬಗ್ಗೆ ಭಕ್ತರಿಗೆ ಮಾಹಿತಿ ನಿಡಲಾಯಿತು. ಇದೇ ಸಂದರ್ಭ ಭಕ್ತರ ಸಲಹೆಗಳನ್ನೂ ಸ್ವೀಕರಿಸಲಾಯಿತು.
ಸಭೆಯಲ್ಲಿ 3 ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಯಿತು , ದೇವಸ್ಥಾನದ ಗಣಪತಿ ಗುಡಿ ಮೊದಲಿದ್ದ ಜಾಗದಲ್ಲೇ ನಿರ್ಮಾಣ ಹಾಗೂ ಸುಬ್ರಹ್ಮಣ್ಯ ಮಠ ಎಂಬ ಹೆಸರು ಹಾಗೂ ಸರ್ಪಸಂಸ್ಕಾರ ಸೇವೆಯ ಬಗ್ಗೆ ಮೊದಲಿದ್ದ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಬಾರದು ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಪೇಜಾವರ ಶ್ರೀಗಳು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಸಂದರ್ಭ ಆತ್ಮೀಯವಾಗಿ ಸ್ವಾಗತಿಸಿ ಸಂಧಾನ ಸಭೆಯಲ್ಲಿ ತೊಡಗಿಸಕೊಳ್ಳಲು ನಿರ್ಧರಿಸಲಾಯಿತು.
ಇತರ ವಿಷಯಗಳಲ್ಲಿ ರಾಜಿ ಮಾಡಿಕೊಂಡರೂ 3 ಪ್ರಮುಖ ಅಂಶಗಳಲ್ಲಿ ಯಾವುದೇ ರಾಜಿ ಇಲ್ಲ ಎಂದು ನಿರ್ಧರಿಸಲಾಯಿತು.
ಇದೇ ಸಂದರ್ಭ ಅಷ್ಟಮಂಗಲ ಪ್ರಶ್ನೆಯಲ್ಲಿ ನಂಬಿಕೆ ಇಲ್ಲ ಎಂದು ನಿನ್ನೆ ಉಡುಪಿಯಲ್ಲಿ ವಿಹಿಂಪ ಅಧ್ಯಕ್ಷ ಎಂ ಬಿ ಪುರಾಣಿಕ್ ಹೇಳಿರುವುದು ಚರ್ಚೆಗೆ ಕಾರಣವಾಯಿತು.
ಸಭೆಯಲ್ಲಿ ಕುಕ್ಕೆ ಭಕ್ತರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ ಹಾಗೂ ಕಿಶೋರ್ ಶಿರಾಡಿ, ಮೋನಪ್ಪ ಮಾನಾಡು, ಬಾಲಕೃಷ್ಣ ರೈ , ಶಿವರಾಮ ರೈ ಮೊದಲಾದವರು ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಸುಬ್ರಹ್ಮಣ್ಯದಲ್ಲಿ ಕುಕ್ಕೆ ಭಕ್ತರ ಹಿತರಕ್ಷಣಾ ವೇದಿಕೆ ಸಭೆ"