ಸುಬ್ರಹ್ಮಣ್ಯ ಸಂಪುಟ ಮಠದಲ್ಲಿ ಯತಿಗಳಿಂದ ತಪ್ತ ಮುದ್ರಾಧಾರಣೆ

July 13, 2019
2:00 PM

ಸುಬ್ರಹ್ಮಣ್ಯ : ಆಷಾಢ ಶುದ್ಧ ಏಕಾದಶಿ ದಿನ  ಶ್ರೀ ಸಂಪುಟ ನರಸಿಂಹ ಸ್ವಾಮಿ  ಮಠದಲ್ಲಿ  ತಪ್ತ ಮುದ್ರಾಧಾರಣೆ ಕಾರ್ಯಕ್ರಮ ನಡೆಯಿತು. ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ತಪ್ತ ಮುದ್ರಾಧಾರಣೆ ನೆರವೇರಿಸಿದರು.

ಪ್ರತಿ ವರ್ಷವೂ ಶನೈಕಾದಶಿ ಆಷಾಢ ಶುಕ್ಲ ದಿನ ತಪ್ತ ಮುದ್ರಾಧಾರಣೆಯನ್ನು ಮಠಾಧೀಶರು ನಡೆಸಿಕೊಂಡು ಬರುತ್ತಾರೆ. ಗಣಪತಿ ಹೋಮದ ಬೆಂಕಿಯಲ್ಲಿ ಮುದ್ರೆಗಳನ್ನು ಕಾಯಿಸಿ ದೇಹದ ಮೇಲೆ ಮುದ್ರೆಗಳನ್ನು ಒತ್ತಲಾಗುತ್ತದೆ. ಶ್ರೀಗಳು ತಮ್ಮ ಶಿಷ್ಯರಿಗೆ ಭಕ್ತರಿಗೆ ತಪ್ತ ಮುದ್ರಾಧಾರಣೆ ಹಾಕಿದರು. ಬಲಭುಜ, ಎಡ ಭಾಗದಲ್ಲಿ ಶಂಖವನ್ನು ಹೊಟ್ಟೆಯ ಮೇಲೆ ಒಂದು ಚಕ್ರವನ್ನು ಮುದ್ರಿಸಲಾಗುತ್ತದೆ, ಲೋಹ ಮುದ್ರೆಗಳನ್ನು ಹಾಕಿಸಿಕೊಳ್ಳುವ ಮೂಲಕ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎನ್ನುವ ನಂಬಿಕೆಯಿಂದ ಅಪಾರ ಭಕ್ತರು ಮುದ್ರಾಧಾರಣೆಯನ್ನು ಹಾಕಿಸಿಕೊಳ್ಳುತ್ತಾರೆ. ಈ ತಪ್ತ ಮುದ್ರಾಧಾರಣೆಯನ್ನು ದೇವಸ್ಥಾನಗಳಲ್ಲಿ ನಡೆಸಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror