ಸುಬ್ರಹ್ಮಣ್ಯ : ಸರ್ಪಸಂಸ್ಕಾರ ವಿವಾದ ಬಗೆಹರಿಸಲು ಪೇಜಾವರ ಶ್ರೀ ಆಗಮನ

Advertisement

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವೆ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿದ್ದ ಸರ್ಪಸಂಸ್ಕಾರ ಸೇವೆಯ ಬಗೆಗಿನ ವಿವಾದವನ್ನು  ಬಗೆಹರಿಸಲು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದಾರೆ.

Advertisement

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿದ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಪಾದಂಗಳವರಿಗೆ ದೇವಸ್ಥಾನದ ಗೋಪುರದಿಂದ ದೇವಸ್ಥಾನದ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಬಳಿಕ ಶ್ರೀಗಳು ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.ಈ ಸಂದರ್ಭ ವಿಶ್ವ ಹಿಂದೂ ಪರಿಷದ್ ಮುಖಂಡ ಎಂ.ಬಿ.ಪುರಾಣಿಕ್ , ಬಜರಂಗದಳ ಮುಖಂಡರಾದ ಶರಣ್ ಪಂಪ್ ವೆಲ್,  ಹಿಂದೂ ಮುಖಂಡರುಗಳಾದ ಜಗದೀಶ ಶೇಣವ, ಪ್ರಮುಖರಾದ ಹರಿಕೃಷ್ಣ ಪುನರೂರು ಮೊದಲಾದವರು ಇದ್ದರು.

Advertisement

ಇದೀಗ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಜೊತೆ ಮಾತನಾಡಿದ ಬಳಿಕ ಪೇಜಾವರ ಶ್ರೀಗಳು ಭಕ್ತರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪೇಜಾವರ ಶ್ರೀಗಳು, ವಿವಾದ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಸುಬ್ರಹ್ಮಣ್ಯ : ಸರ್ಪಸಂಸ್ಕಾರ ವಿವಾದ ಬಗೆಹರಿಸಲು ಪೇಜಾವರ ಶ್ರೀ ಆಗಮನ"

Leave a comment

Your email address will not be published.


*