ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್‍ಕುಮಾರ್ ಕಟೀಲ್ ಸುಳ್ಯದಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿ ಅಬ್ಬರದ ಚುನಾವಣಾ ಪ್ರಚಾರ ಕೈಗೊಂಡರು.
ನಗರದ ಜ್ಯೋತಿ ವೃತ್ತದಿಂದ ಆರಂಭಗೊಂಡ ರೋಡ್ ಶೋದಲ್ಲಿ ಅಭ್ಯರ್ಥಿ ನಳಿನ್‍ಕುಮಾರ್ ಕಟೀಲ್ ಮತ್ತು ಬಿಜೆಪಿ ನಾಯಕರು, ನೂರಾರು ಮಂದಿ ಮಹಿಳೆಯರು, ಕಾರ್ಯಕರ್ತರು ಭಾಗವಹಿಸಿದರು. ನಗರದ ಮುಖ್ಯ ರಸ್ಥೆಯಲ್ಲಿ ಸಾಗಿದ ರೋಡ್ ಶೋ ಶ್ರೀರಾಂ ಪೇಟೆ, ಬಸ್, ನಿಲ್ದಾಣದ ಮೂಲಕ ಗಾಂಧೀನಗರದ ವರೆಗೆ ತೆರಳಿ ಅಲ್ಲಿಂದ ಹಿಂತಿರುಗಿ ಬಂದು ನಗರದ ಬಸ್ ನಿಲ್ದಾಣದ ಬಳಿಯಲ್ಲಿ ಸಮಾವೇಶಗೊಂಡಿತು.
ಅಭ್ಯರ್ಥಿ ನಳಿನ್‍ಕುಮಾರ್ ಕಟೀಲ್, ಶಾಸಕ ಎಸ್.ಅಂಗಾರ ಮತ್ತಿತರ ನಾಯಕರು ಮತ್ತು ಮಹಿಳೆಯರೂ ಸೇರಿದ ಕಾರ್ಯಕರ್ತರು ಕೇಸರಿ ಪೇಟ ಧರಿಸಿ ಗಮನ ಸೆಳೆದರು. ಕೇರಳದ ಚೆಂಡೆ ಮೇಳದ ಅಬ್ಬರಕ್ಕೆ ಮೋದಿ ಮೋದಿ ಘೋಷಣೆ ರೋಡ್ ಶೋಗೆ ಸಾಥ್ ನೀಡಿದವು.
ಶಾಸಕ ಎಸ್.ಅಂಗಾರ, ಮಾಜಿ ಸಚಿವ ಕೃಷ್ಣ ಪಾಲೆಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ ಮಿಜಾರು, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ತಾಲೂಕು ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಹೆಗ್ಡೆ, ಸುಬೋದ್ ಶೆಟ್ಟಿ ಮೇನಾಲ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಶ್ ಕಣೆಮರಡ್ಕ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಭಾಗೀರಥಿ ಮುರುಳ್ಯ, ವೆಂಕಟ್ ದಂಬೆಕೋಡಿ, ಮತ್ತಿತರರು ಉಪಸ್ಥಿತರಿದ್ದರು. ರೋಡ್ ಶೋ ಆರಂಭಕ್ಕೆ ಮುನ್ನ ನಳಿನ್‍ಕುಮಾರ್ ಕಟೀಲು, ಶಾಸಕ ಎಸ್.ಅಂಗಾರ ಮತ್ತಿತರರು ನಗರದ ಕಲ್ಕುಡ ದೈವಸ್ಥಾನಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸುಳ್ಯದಲ್ಲಿ ನಳಿನ್ ರೋಡ್ ಶೋ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Be the first to comment on "ಸುಳ್ಯದಲ್ಲಿ ನಳಿನ್ ರೋಡ್ ಶೋ"