ಸುಳ್ಯದಲ್ಲಿ ಪತ್ರಿಕಾ ದಿನಾಚರಣೆ: ವಿಶೇಷ ಉಪನ್ಯಾಸ, ಸನ್ಮಾನ

July 13, 2019
11:41 AM

ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ವಿಶೇಷ ಉಪನ್ಯಾಸ ಮತ್ತು ಸನ್ಮಾನ ಕಾರ್ಯಕ್ರಮ ಜುಲೈ 23 ರಂದು ಪೂ.10 ಗಂಟೆಗೆ ಸುಳ್ಯ ಅಂಬೇಡ್ಕರ್ ಕನ್ನಡ ಭವನದಲ್ಲಿ ನಡೆಯಿಲಿದೆ.
ಶಾಸಕ ಎಸ್.ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸುವರು. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸುವರು.

Advertisement
Advertisement
Advertisement
Advertisement

ಉಪನ್ಯಾಸ:
ಪತ್ರಿಕಾ ದಿನಾಚರಣೆಯ ಪ್ರಯುಕ್ತ ವಿಶೇಷಚಉಪನ್ಯಾಸ ಕಾರ್ಯಕ್ರಮ ನಡೆಯಲಿದೆ‌‌.
ಮಾಧ್ಯಮಗಳು ಮತ್ತು ಪ್ರಚಲಿತ ವಿದ್ಯಮಾನ‘ ಎಂಬ ವಿಚಾರದಲ್ಲಿ ಹೊಸದಿಗಂತ ಪತ್ರಿಕೆಯ ಮಂಗಳೂರು ಆವೃತ್ತಿಯ ಸ್ಥಾನೀಯ ಸಂಪಾದಕ ಪ್ರಕಾಶ್ ಇಳಂತಿಲ ಉಪನ್ಯಾಸ ನೀಡುವರು.

Advertisement

ಮಾದಕ ವಸ್ತುಗಳ ತಡೆ ಜಾಗೃತಿ‘ ಕುರಿತು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿಅಹಮ್ಮದ್ ಉಪನ್ಯಾಸ ನೀಡಲಿದ್ದಾರೆ.

ಸನ್ಮಾನ:
ಎರಡೂವರೆ ದಶಕಗಳ ಕಾಲ ಪತ್ರಕರ್ತರಾಗಿ ದುಡಿದ ಪಯಸ್ವಿನಿ ಪತ್ರಿಕೆಯ ಮಾಜಿ ಸಂಪಾದಕ ಚಂದ್ರೇಶ್ ಗೋರಡ್ಕ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುವುದು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಪಿ.ಸಿ.ಜಯರಾಮ ಸನ್ಮಾನ ನೆರವೇರಿಸುವರು.

Advertisement

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ
February 24, 2025
10:16 PM
by: The Rural Mirror ಸುದ್ದಿಜಾಲ
ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror