ಸುಳ್ಯದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ ದೇಶದ ಉಳಿವಿಗೆ ಮತ್ತೊಮ್ಮೆ ಮೋದಿ ಸರ್ಕಾರ- ನಳಿನ್‍ಕುಮಾರ್ ಕಟೀಲ್

Advertisement

ಸುಳ್ಯ: ಭಾರತ ದೇಶವನ್ನು ಉಳಿಸಲು, ಜನರ ವಿಶ್ವಾಸಕ್ಕೆ ತಕ್ಕಂತೆ ಆಡಳಿತ ನಡೆಸಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದ ಅನಿವಾರ್ಯತೆ ಇದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ.
ಸುಳ್ಯದಲ್ಲಿ ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಡೆದ ರೋಡ್ ಶೋ ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ, ಕಾಶ್ಮೀರ ಭಾರತದಲ್ಲಿಯೇ ಉಳಿಯಲು, ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮತ್ತು ಪಾಕಿಸ್ಥಾನಕ್ಕೆ ತಕ್ಕ ಉತ್ತರ ನೀಡಲು ಹಾಗು ದೇಶ ಅಭಿವೃದ್ಧಿಯೆಡೆಗೆ ಸಾಗಲು ನರೇಂದ್ರ ಮೋದಿಯವರಂತಹಾ ವಿಶ್ವ ನಾಯಕ ದೇಶದ ಪ್ರಧಾನಿಯಾಗಿರಬೇಕು. ಆ ನಂಬಿಕೆ ಜನರಲ್ಲಿ ಇರುವುದರಿಂದಲೇ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕೆಂದು ಜನತೆ ಬಯಸಿದ್ದಾರೆ. ಕಳೆದ ಐದು ವರ್ಷದಲ್ಲಿ ದೇಶದಲ್ಲಿ ಅದ್ಭುತ ಅಭಿವೃದ್ಧಿ ಕೆಲಸಗಳು ನಡೆದಿದೆ. ಹಳ್ಳಿಯಿಂದ ದಿಲ್ಲಿಯವರೆಗೆ ಪರಿವರ್ತನೆ ಸಾಧ್ಯವಾಗಿದೆ ಎಂದರು.

Advertisement

ಶಾಸಕ ಎಸ್.ಅಂಗಾರ , ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮಾತನಾಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ ಮಿಜಾರು, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಹೆಗ್ಡೆ, ಸುಬೋದ್ ಶೆಟ್ಟಿ ಮೇನಾಲ, ವೆಂಕಟ್ ದಂಬೆಕೋಡಿ, ಭಾಗೀರಥಿ ಮುರುಳ್ಯ ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ನಗರಾಧ್ಯಕ್ಷ ವಿನಯಕುಮಾರ್ ಕಂದಡ್ಕ ನಿರೂಪಿಸಿದರು.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಸುಳ್ಯದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ ದೇಶದ ಉಳಿವಿಗೆ ಮತ್ತೊಮ್ಮೆ ಮೋದಿ ಸರ್ಕಾರ- ನಳಿನ್‍ಕುಮಾರ್ ಕಟೀಲ್"

Leave a comment

Your email address will not be published.


*