ಸುಳ್ಯದಲ್ಲಿ ರಂಜಿಸಿದ ರಾಜ್ಯಮಟ್ಟದ ಲಗೋರಿ ಪಂದ್ಯಾಟ

December 25, 2019
8:43 AM

ಸುಳ್ಯ: ಸುಳ್ಯ ತಾಲೂಕು ಲಗೋರಿ ಅಸೋಸಿಯೇಶನ್, ದ.ಕ‌.ಜಿಲ್ಲಾ ಲಗೋರಿ ಅಸೋಸಿಯೇಷನ್ ಆಶ್ರಯದಲ್ಲಿ ಕೆ.ವಿ.ಜಿ ಸುಳ್ಯ ಹಬ್ಬದ ಪ್ರಯುಕ್ತ ರಾಜ್ಯ ಮಟ್ಟದ ಆಹ್ವಾನಿತ ಹೊನಲು ಬೆಳಕಿನ ಲಗೋರಿ ಪಂದ್ಯಾಟ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಿತು. ಎಂಟು ತಂಡಗಳು ಭಾಗವಹಿಸಿದ ಲೀಗ್ ಮಾದರಿಯ ಪಂದ್ಯಾಟ ಲಗೋರಿ ಪ್ರಿಯರ ಮನ ರಂಜಿಸಿತು. ಹನುಮಾನ್ ಲಗೋರಿಯನ್ ಮಂಗಳೂರು, ಚಿಕ್ಕಮಗಳೂರು ಜಿಲ್ಲಾ ತಂಡ, ಪಂಚ ಶ್ರೀ ಪಂಜ, ವಿದ್ಯಾರಶ್ಮಿ ವಿದ್ಯಾಲಯ, ಚಿಗುರು ಯುವಕ ಮಂಡಲ ಪೆರಾಜೆ, ಕೆ.ವಿ‌.ಜಿ ವಿದ್ಯಾಸಂಸ್ಥೆ ತಂಡ, ಗರುಡ ಚೊಕ್ಕಾಡಿ, ಕೊಡಗು ತಂಡ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು.

ದ.ಕ.ಜಿಲ್ಲಾ ಲಗೋರಿ ಅಸೋಸಿಯೇಷನ್ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಉದ್ಘಾಟಿಸಿದರು. ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ‌.ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ನಗರ ಪಂಚಾಯತ್ ಸದಸ್ಯ ವಿನಯಕುಮಾರ್ ಕಂದಡ್ಕ, ತಾಲೂ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಬಿ.ಕೆ‌.ಮಾಧವ, ಸೀತಾರಾಮ ಕೇವಳ, ಲಗೋರಿ ಅಸೋಸಿಯೇಷನ್ ತಾಲೂಕು ಕಾರ್ಯದರ್ಶಿ ವಿಶ್ವನಾಥ್ ಕೆ ಉಪಸ್ಥಿತರಿದ್ದರು.

ಜಿಲ್ಲಾ ಲಗೋರಿ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು ಸ್ವಾಗತಿಸಿ ಪ್ರಸ್ತಾವನೆಗೈದರು. ತೀರ್ಥವರ್ಣ ವಂದಿಸಿದರು. ದಿನೇಶ್ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪತ್ರಕರ್ತ, ಕೃಷಿಕ : ಮಹೇಶ್ ಪುಚ್ಚಪ್ಪಾಡಿ
February 18, 2026
11:06 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror