ಸುಳ್ಯ: ಸುಳ್ಯದ ಉಪನೋಂದಣಿ ಕಚೇರಿಯಲ್ಲಿ ಭ್ರಷ್ಟಾಚಾರ ಇರುವುದು ಬೆಳಕಿಗೆ ಬಂದಿದೆ. ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವುದು ಹಾಗೂ ಹೆಚ್ಚುವರಿ ಹಣಕ್ಕಾಗಿ ಬೇಡಿಕೆ ಇಟ್ಟಿರುವುದು ಕಂಡುಬಂದಿದೆ. ಇಂತಹ ಅಧಿಕಾರಿಗಳು ಸುಳ್ಯದಲ್ಲಿ ಅಗತ್ಯವಿಲ್ಲ. ಭ್ರಷ್ಟಾಚಾರ ರಹಿತ ಆಡಳಿತ ವ್ಯವಸ್ಥೆ ಸುಳ್ಯದಲ್ಲಿ ಇರಬೇಕು. ಇದಕ್ಕಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಉಪನೋಂದಣಿ ಕಚೇರಿಯ ಈ ಅಧಿಕಾರಿ ಸುಳ್ಯದಲ್ಲಿ ಅಗತ್ಯವಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ತಕ್ಷಣವೇ ಸುಳ್ಯದಿಂದ ವರ್ಗಾವಣೆಯಾಗಬೇಕು ಹಾಗೂ ಸೂಕ್ತ ಕ್ರಮವಾಗಬೇಕು ಎಂದು ಅಂಗಾರ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel