ಸುಳ್ಯದಲ್ಲಿ ವಾಲ್ಮೀಕಿ ಜಯಂತಿ

October 14, 2019
6:39 AM

ಸುಳ್ಯ: ಸುಳ್ಯ ತಾಲೂಕು ನಾಡಹಬ್ಬಗಳ ದಿನಾಚರಣಾ ಸಮಿತಿಯ ಆಶ್ರಯದಲ್ಲಿ ಸುಳ್ಯ ತಾಲೂಕು ಪಂಚಾಯತ್ ಸಭಾಭವನದಲ್ಲಿ ಶ್ರೀ ಮಹರ್ಷಿ ವಾಲ್ಮಿಕಿ ಜಯಂತಿ ಆಚರಣೆ ನಡೆಯಿತು.

ಸಮಾರಂಭವನ್ನು ಉದ್ಘಾಟಿಸಿದ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹ್ಮದ್ ಮಾತನಾಡಿ ಶ್ರೀರಾಮ ಆದರ್ಶತೆಗೆ ಮತ್ತೊಂದು ಹೆಸರು. ಮಹರ್ಷಿ ವಾಲ್ಮೀಕಿ ಮತ್ತು ಅವರು ಮಾಡಿದ ಕಾರ್ಯ ಶ್ರೀರಾಮನ ಕೀರ್ತಿಯಷ್ಟೆ ಅಜರಾಮರವಾದದ್ದು. ಸಮುದಾಯವನ್ನು ಮೀರಿದ ಸಾಧಕ ವಾಲ್ಮೀಕಿ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್.ರೈ ಮಾತನಾಡಿ, ವಾಲ್ಮೀಕಿಯಂತಹ ಮಹನೀಯರ ಸಾಧನೆ ಮತ್ತು ರಾಮಾಯಣದ ಮೂಲಕ ಅವರು ಕೊಟ್ಟ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸುವ ಪ್ರಯತ್ನ ಆಗಬೇಕು ಎಂದು ಹೇಳಿದರು. ಪತ್ರಕರ್ತ ದುರ್ಗಾಕುಮಾರ್ ನಾಯರ್‍ಕೆರೆ ವಾಲ್ಮೀಕಿ ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕಿ ಎ.ಎಸ್.ಲಕ್ಷ್ಮೀದೇವಿ ಉಪಸ್ಥಿತರಿದ್ದರು. ವಾರ್ಡನ್ ಕೃಷ್ಣಪ್ಪ ಗೌಡ ಸ್ವಾಗತಿಸಿ, ಶಿಕ್ಷಕಿ ಕವಿತಾ ವಂದಿಸಿದರು. ಅರ್ಶಿಯಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror