ಸುಳ್ಯ: ಪರಿಸರದ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪರಿಸರ ದಿನಾಚರಣೆ ಪೂರಕವಾಗಬೇಕು. ಗಿಡ ನೆಟ್ಟು ಅದನ್ನು ಉಳಿಸುವಲ್ಲಿ ಯುವ ಸಮುದಾಯ ಆಸಕ್ತಿ ಹೊಂದಬೇಕು ಎಂದು ಸುಳ್ಯದ ಸಿವಿಲ್ ನ್ಯಾಯಾಧೀಶ ಯಶ್ವಂತ ಕುಮಾರ್ ಕೆ ಹೇಳಿದರು.
ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಸ.ಪ.ಪೂ.ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಸುಳ್ಯ ಸ.ಪ.ಪೂ.ಕಾಲೇಜು ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ದಳ ಸುಬ್ರಾಯ ಭಟ್, ವಿನಾಶಕ್ಕೆ ಪ್ರಕೃತಿಯನ್ನು ಬಳಸಬೇಡಿ. ಅದರಿಂದ ಮಾನವನ ಆವಾಸಕ್ಕೆ ಮಾರಕ ಎಂದ ಅವರ ಅಕ್ರಮ ಗಣಿಗಾರಿಕೆ, ಅವೈಜ್ಞಾನಿಕ ಮೀನುಗಾರಿಕೆ ಕೂಡ ಪ್ರಕೃತಿ ವಿಕೋಪದಂತಹ ಘಟನೆಗೆ ಹೇತು ಎಂದು ಅವರು ವಿವರಿಸಿದರು.
ವಲಯ ಅರಣ್ಯಾಧಿಕಾರಿ ಮಂಜುನಾಥ ಎನ್ ಮಾತನಾಡಿ, ಒಂದು ಗಿಡ ಮರವಾಗಿ ಬೆಳೆಯಲು 60 ವರ್ಷ ಬೇಕು. ಅದನ್ನು ಕಡಿಯಲು 5 ನಿಮಿಷ ಸಾಕು. ಹೀಗಾಗಿ ಕಡಿಯುವ ಮನಸ್ಥಿತಿ ಬದಲಾಯಿಸಿ ಬೆಳೆಸುವ ಬಗ್ಗೆ ಯೋಚನೆ ಮಾಡಬೇಕು. ಸ್ವ ಜಾಗೃತಿ ಇಲ್ಲದಿರುವುದೇ ನಾಶಕ್ಕೆ ಮುಖ್ಯ ಕಾರಣ ಎಂದು ವಿಶ್ಲೇಷಿಸಿದರು.
ಸುಳ್ಯ.ಸಪ.ಪೂ.ಕಾಲೇಜು ಪ್ರಾಂಶುಪಾಲ ಮೋಹನ ಗೌಡ ಬಿ.ಕೆ. ಮಾತನಾಡಿ, ನೆಲ, ಜಲ, ಗಾಳಿ ಮಾಲಿನ್ಯ ಆಗದಂತೆ ಪ್ರತಿಯೊಬ್ಬರು ಜಾಗೃತರಾಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಉಪಾಧ್ಯಕ್ಷ ಶ್ರೀಹರಿ ಕುಕ್ಕುಡೇಲು ಮಾತನಾಡಿ, ವಿದ್ಯಾರ್ಥಿ ಶಕ್ತಿಗೆ ಪರಿಸರ ಸಂರಕ್ಷಿಸುವ ಸಾಮಥ್ರ್ಯ ಇದೆ. ಈ ನಿಟ್ಟಿನಲ್ಲಿ ಹೆಚ್ಚು ಒತ್ತುಕೊಡಬೇಕು ಎಂದರು.
ವೇದಿಕೆಯಲ್ಲಿ ಸುಳ್ಯ ಸಬ್ ಇನ್ಸ್‍ಪೆಕ್ಟರ್ ಹರೀಶ್ ಕುಮಾರ್, ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಧಿಕಾರಿ ಪ್ರೀತಿ ನಾಯ್ಕ ಉಪಸ್ಥಿತರಿದ್ದರು. ವಕೀಲ ಹರೀಶ್ ಬೂಡುಪನ್ನೆ ಸ್ವಾಗತಿಸಿ, ನಾಗೇಶ ವಂದಿಸಿದರು. ದಿನೇಶ್ ಕಾರ್ಯಕ್ರಮ ನಿರೂಪಿಸಿದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಸುಳ್ಯದಲ್ಲಿ ವಿಶ್ವ ಪರಿಸರ ದಿನಾಚರಣೆ"