ಸುಳ್ಯದ ಶಿಕ್ಷಕಿ ಪದ್ಮಾ ಡಿ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

September 3, 2019
9:58 PM

ಸುಳ್ಯ: ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ತಾಲೂಕಿಗೆ ಒಲಿದು ಬಂದಿದೆ. ಆಲೆಟ್ಟಿ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪದ್ಮಾ.ಡಿ ಅವರು ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸೆ.5 ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

36 ವರ್ಷಗಳ ಶಿಕ್ಷಕ ವೃತ್ತಿಯಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನಾಗಪಟ್ಟಣ, ಸ.ಹಿ.ಪ್ರಾ ಶಾಲೆ ಪಡ್ಪಿನಂಗಡಿ, ಸ.ಹಿ.ಪ್ರಾ ಶಾಲೆ ಮಂಡೆಕೋಲು ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಸ.ಹಿ.ಪ್ರಾ ಶಾಲೆ ಆಲೆಟ್ಟಿ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿದ್ದಾರೆ. ಕರ್ತವ್ಯ ನಿರ್ವಹಿಸಿದ ಶಾಲೆಗಳಲ್ಲಿ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಿದ ಮತ್ತು ಶಾಲೆಯ ಭಾತಿಕ ಸೌಕರ್ಯವನ್ನು ಹೆಚ್ಚಿಸಲು ನಡೆಸಿದ ಸೇವೆಯನ್ನು ಪರಿಗಣಿಸಿ ಅವರನ್ನು ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮಂಡೆಕೋಲು ಮತ್ತು ಆಲೆಟ್ಟಿ ಶಾಲೆಯಲ್ಲಿ ಬಾಲವನವನ್ನು ನಿರ್ಮಿಸಿದ್ದಾರೆ. ಅಲ್ಲದೆ ಶಾಲೆಗಳಲ್ಲಿ ಇವರ ನೇತೃತ್ವದಲ್ಲಿ ಸ್ಮಾರ್ಟ್ ಕ್ಲಾಸ್‍ಗಳ ನಿರ್ಮಾಣ, ಶಾಲೆಗಳಲ್ಲಿ ಆಕರ್ಷಕ ದ್ವಾರಗಳ ನಿರ್ಮಾಣ, ಶಾಲೆಗಳಲ್ಲಿಟಿ.ವಿ, ಕಂಪ್ಯೂಟರ್, ಡಿಶ್, ಪೀಠೋಪಕರಣಗಳ ಕೊಡುಗೆ, ಗ್ರಂಥಾಲಯ ಕೊಠಡಿ, ಸೈಕಲ್ ಶೆಡ್, ಆವರಣ ಗೋಡೆ, ಶೌಚಾಲಯಗಳ ನಿರ್ಮಾಣ ನಡೆಸಲಾಗಿದೆ.ಇವರ ಶಾಲೆಯಲ್ಲಿ ನಲಿಕಲಿ ತರಗತಿಗಳಿಗೆ ಉತ್ತಮ ವ್ಯವಸ್ಥೆ ಮಾಡಿದ್ದಾರೆ. ಉತ್ತಮ ಶಿಕ್ಷಣವನ್ನು ನೀಡುವುದರ ಜೊತೆಗೆ ಶಾಲೆಯ ಮೂಲಭೂತ ಅಭಿವೃದ್ಧಿಗೆ ಇವರು ನೀಡಿದ ಕೊಡುಗೆಯನ್ನು ಪರಿಗಣಿಸಿ ರಾಜ್ಯಮಟ್ಟದ ಪ್ರಶಸ್ತಿ ಇವರನ್ನು ಅರಸಿ ಬಂದಿದೆ. ಪದ್ಮಾ ಅವರ ಪತಿ ಪಿ.ಎಂ.ರಂಗನಾಥ್ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದಲ್ಲಿ ವ್ಯವಸ್ಥಾಪಕರಾಗಿದ್ದಾರೆ. ಮಕ್ಕಳು ಡಾ.ಸೋನಿಕಾ ಮತ್ತು ಡಾ.ಸುಲೇಖಾ ವೈದ್ಯಕೀಯ ವಿದ್ಯಾರ್ಥಿಗಳು.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ
March 14, 2025
11:03 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ
March 14, 2025
10:57 PM
by: The Rural Mirror ಸುದ್ದಿಜಾಲ
ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ
March 14, 2025
6:57 AM
by: The Rural Mirror ಸುದ್ದಿಜಾಲ
ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ
March 14, 2025
6:54 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror