ಸುಳ್ಯ: ಸುಳ್ಯ ಸಿದ್ಧಿ ವಿನಾಯಕ ಸೇವಾ ಸಮಿತಿ ಹಾಗು ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆದ 51ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಂಪನ್ನಗೊಂಡಿತು. ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಐದು ದಿನಗಳ ಕಾಲ ನಡೆದ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಂಡಿತು. ಚೆಂಡೆ ವಾದ್ಯಗಳು, ನೃತ್ಯ ಭಜನೆ, ಸಿಡಿ ಮದ್ದಿನ ವರ್ಣ ಚಿತ್ತಾರ ಶೋಭಾಯಾತ್ರೆಗೆ ಸಾಥ್ ನೀಡಿತು. ಶ್ರೀ ಚೆನ್ನಕೇಶವ ದೇವಸ್ಥಾನದಿಂದ ಹೊರಟ ಆಕರ್ಷಕ ಶೋಭಾಯಾತ್ರೆ ನಗರದಲ್ಲಿ ಸಂಚರಿಸಿ ವಿಗ್ರಹವನ್ನು ಪಯಸ್ವಿನಿ ನದಿಯಲ್ಲಿ ಜಲಸ್ತಂಭನಗೊಳಿಸುವುದರೊಂದಿಗೆ ಸಮಾಪನಗೊಂಡಿತು. ನಗರದ ರಸ್ತೆ ಬದಿಯಲ್ಲಿ ಜಮಾಯಿಸಿದ್ದ ನೂರಾರು ಮಂದಿ ಮೆರವಣಿಗೆಯನ್ನು ವೀಕ್ಷಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel