ಸುಳ್ಯ: ತಾಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ಹಾಗೂ 2019-18ನೇ ಸಾಲಿನ ಪ್ರಾಕೃತಿಕ ವಿಕೋಪದಡಿಯಲ್ಲಿ ಮುಂದಿನ ದಿನಗಳಲ್ಲಿ ಅಧಿಕ ಮಳೆ ಬೀಳುವ ಸಂಭವವಿರುವುದರಿಂದ ಜನ, ಜಾನುವಾರುಗಳಿಗೆ, ಆಸ್ತಿ ಪಾಸ್ತಿಗಳಿಗೆ ಹಾನಿಯಾಗುವುದನ್ನು ತಡೆಗಟ್ಟುವ ಸಲುವಾಗಿ ಮುಂಜಾಗೃತಾ ಕ್ರಮವನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸುಳ್ಯ ತಾಲೂಕು ಕಚೇರಿಯಲ್ಲಿ ದಿನದ 24*7 ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ. ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆಯು 08257231231 ಆಗಿರುತ್ತದೆ.
ಸಾರ್ವಜನಿಕರು ಯಾವುದೇ ರೀತಿಯ ಪ್ರಾಕೃತಿಕ ವಿಕೋಪ ನಡೆದಲ್ಲಿ ಅಥವಾ ಕುಡಿಯುವ ನೀರಿನ ಸಮಸ್ಯೆಯುಂಟಾದಲ್ಲಿ ಈ ಕಂಟ್ರೋಲ್ ರೂಂ ಗಳನ್ನು ಸಂಪರ್ಕಿಸಬೇಕಾಗಿ ತಾಲೂಕು ತಹಶೀಲ್ದಾರ್ ಅವರು ವಿನಂತಿಸಿಕೊಂಡಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಸುಳ್ಯ ತಾಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ಆರಂಭ"