ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ 2019-2022 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಂಗಳವಾರ ಸುಳ್ಯ ಚನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ಉದ್ಘಾಟನೆಗೊಂಡು ಕಾರ್ಯಕ್ರಮ ನಡೆಯುತ್ತಿದೆ.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ತಾಲೂಕು ಸವಿತಾ ಸಮಾಜದ ಅಧ್ಯಕ್ಷ ವಸಂತ ಮೂರಾಜೆ ವಹಿಸಿದ್ದು ಪದಗ್ರಹಣ ಕಾರ್ಯಕ್ರಮವನ್ನು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಆನಂದ ಗುಂಡದಡೆ ನೆರವೇರಿಸಿದರು. ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ ಮಹದೇವ, ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಎಂ.ಬಿ.ಸದಾಶಿವ, ಸವಿತಾ ಸೌಹಾರ್ದ ಸಹಕಾರಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್, ಸವಿತಾ ಸಮಾಜದ ರಾಜ್ಯಪ್ರತಿನಿಧಿ ವಸಂತ ಬೆಳ್ಳೂರು, ಸುಳ್ಯ ಬಾರ್ಬರ್ ಎಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಎಸ್ ಭಾಗವಹಿಸಿದ್ದಾರೆ.
ಸಂಘದ ಖಜಾಂಜಿ ಮಹೇಶ್ ಸಾಲ್ತಾಡಿ ಸ್ವಾಗತಿಸಿ ಸಂಘದ ಗೌರವ ಸಲಹೆಗಾರ ಹರೀಶ್ ಬಂಟ್ವಾಳ ಪ್ರಸ್ತಾವನೆಗೈದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಸುಳ್ಯ ತಾಲೂಕು ಸವಿತಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ"