ಸುಳ್ಯ ನಗರದ ಅಭಿವೃದ್ಧಿಗೆ ಬಿಜೆಪಿ ಪ್ರಣಾಳಿಕೆ – ವೆಂಕಟ್ ವಳಲಂಬೆ

Advertisement

ಸುಳ್ಯ:ಸುಳ್ಯ ನಗರದ ಸಮಗ್ರ ಅಭಿವೃದ್ಧಿಯ ದೃಷ್ಠಿಯಿಂದ ಪ್ರಮುಖರ ಅಭಿಪ್ರಾಯಗಳನ್ನು ಕ್ರೂಢೀಕರಿಸಿ ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರ ಪಂಚಾಯತ್ ನ ಎಲ್ಲಾ 20 ವಾರ್ಡ್ ಗಳನ್ನೂ ಗೆಲ್ಲುವ ದೃಷ್ಟಿಯಿಂದ ನಗರದ ಎಲ್ಲಾ ಸಮಸ್ಯೆಗಳನ್ನೂ, ಬೇಡಿಕೆಗಳನ್ನೂ ಸೇರ್ಪಡೆ ಮಾಡಿ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು. ಬಿಜೆಪಿ ಅಧಿಕಾರಕ್ಕೆ ಬಂದರೆ ಅದರ ಅನುಷ್ಠಾನಕ್ಕೆ ಪ್ರಯತ್ನಿಸಲಾಗುವುದು ಎಂದರು. ಶಾಶ್ವತ ಕುಡಿಯುವ ನೀರಿನ ಯೋಜನೆ, ಕಸ ವಿಲೇವಾರಿಗೆ ಸಮರ್ಪಕ ಯೋಜನೆ ಸೇರಿ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲಾಗುವುದು. ಈ ಬಾರಿ ಎಲ್ಲಾ ವಾರ್ಡ್ ಗಳಲ್ಲಿಯೂ ಹೊಸ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ಹೊಸ ಹುರುಪಿನೊಂದಿಗೆ ನಗರದ ಅಭಿವೃದ್ಧಿಗೆ ಶ್ರಮಿಸಬೇಕು ಎಂಬ ನೆಲೆಯಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ ಎಂದರು.

Advertisement
Advertisement

ಸುದ್ದಿಗೋಷ್ಠಿಯಲ್ಲಿ ಚುನಾವಣಾ ಉಸ್ತುವಾರಿ ಅಪ್ಪಯ್ಯ ಮಣಿಯಾಣಿ, ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮಂಡಲ ಉಪಾಧ್ಯಕ್ಷ ವಿನಯಕುಮಾರ್ ಮುಳುಗಾಡು, ಪ್ರಮುಖರಾದ ಪಿ.ಕೆ.ಉಮೇಶ್, ಶೀನಪ್ಪ ಬಯಂಬು, ಸೋಮನಾಥ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಸುಳ್ಯ ನಗರದ ಅಭಿವೃದ್ಧಿಗೆ ಬಿಜೆಪಿ ಪ್ರಣಾಳಿಕೆ – ವೆಂಕಟ್ ವಳಲಂಬೆ"

Leave a comment

Your email address will not be published.


*