ಸುಳ್ಯ ನಗರದ ಮೂಲಭೂತ ಅಭಿವೃದ್ಧಿಗೆ ಒತ್ತು : ಎಸ್.ಅಂಗಾರ

May 25, 2019
3:46 PM

ಸುಳ್ಯ: ಸುಳ್ಯ ನಗರದ ಮೂಲಭೂತ ಅಭಿವೃದ್ಧಿಗೆ ಬಿಜೆಪಿ ಒತ್ತು ನೀಡಲಿದೆ ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.

Advertisement
Advertisement
Advertisement

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಮೂರು ಅವಧಿಯಲ್ಲಿ ಬಿಜೆಪಿ ಆಡಳಿತದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಈ ಹಿಂದೆ ನಗರ ಪಂಚಾಯತನ್ನು ಆಡಳಿತ ನಡೆಸಿದ್ದ ಕಾಂಗ್ರೆಸ್ಸಿಗರು ಸಾರ್ವಜನಿಕ ಅಗತ್ಯತೆಗೆ ಭೂಮಿ ಕಾಯ್ದಿರಿಸುವ ಕೆಲಸ ಮಾಡಿಲ್ಲ. ಇದರಿಂದ ಘನ ತ್ಯಾಜ್ಯ ವಿಲೇವಾರಿ ಘಟಕ ಸೇರಿದಂತೆ ಹಲವು ಅಭಿವೃದ್ಧಿಗೆ ಭೂಮಿಯ ಅಲಭ್ಯತೆಯ ಸಮಸ್ಯೆ ಎದುರಾಗಿದೆ. ಸೀಮಿತ ಭೂಮಿ ಲಭ್ಯತೆಯ ಮಧ್ಯೆಯೂ ಸಾಕಷ್ಟು ಅಭಿವೃದ್ಧಿ ಮಾಡಲು ಸಾಧ್ಯವಾಗಿದೆ ಎಂದರು. ಮುಂದೆಯೂ ನಗರದ ಅಭಿವೃದ್ಧಿಗೆ ಬಿಜೆಪಿ ಆದ್ಯತೆ ನೀಡಲಿದೆ. ಕುಡಿಯುವ ನೀರು, ನಗರದ ಎಲ್ಲಾ ರಸ್ತೆಗಳ ಕಾಂಕ್ರೀಟೀಕರಣಕ್ಕೆ ಆದ್ಯೆತೆ ನೀಡಲಾಗುವುದು ಎಂದರು. ಈ ಬಾರಿ ನಗರದ ಎಲ್ಲಾ 20 ವಾರ್ಡ್‍ಗಳಲ್ಲಿಯೂ ಬಿಜೆಪಿಗೆ ಗೆಲ್ಲುವ ಅವಕಾಶ ಇದೆ. ಲೋಕಸಭಾ ಚುನಾವಣೆಯಲ್ಲಿನ ಬಿಜೆಪಿಯ ಗೆಲುವು ಮತ್ತು ಬಹುಮತ ನಿರೀಕ್ಷಿತ. ಲೋಕಸಭಾ ಚುನಾವಣೆಯ ಗೆಲುವು ನಗರ ಪಂಚಾಯಿತಿಯ ಗೆಲುವಿಗೆ ಪ್ರೇರಣೆಯಾಗಲಿದೆ ಎಂದು ಅಂಗಾರ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಹೆಗ್ಡೆ, ಸುಬೋದ್ ಶೆಟ್ಟಿ ಮೇನಾಲ, ನಗರ ಬಿಜೆಪಿ ಅಧ್ಯಕ್ಷ ಹಾಗು ನ.ಪಂ.ಅಭ್ಯರ್ಥಿವಿನಯಕುಮಾರ್ ಕಂದಡ್ಕ, ಅಭ್ಯರ್ಥಿಗಳಾದ ಹರೀಶ್ ಬೂಡುಪನ್ನೆ, ಶಶಿಕಲಾ ಎ, ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಉಪಾಧ್ಯಕ್ಷೆ ಶುಭದಾ ಎಸ್ ರೈ, ಸದಸ್ಯರಾದ ಪುಷ್ಪಾ ಮೇದಪ್ಪ, ಜಾಹ್ನವಿ ಪ್ರಮುಖರಾದ ಪಿ.ಕೆ.ಉಮೇಶ್, ಸೋಮನಾಥ ಪೂಜಾರಿ, ಗಿರೀಶ್ ಕಲ್ಲುಗದ್ದೆ, ವೇದಾವತಿ ಮಾಣಿಬೆಟ್ಟು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ | ಸಂಕ್ರಾಂತಿ ಶುಭತರಲಿ
January 14, 2025
7:21 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-01-2025 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಮುಂದೆ ತಾಪಮಾನ ಏರಿಕೆ ನಿರೀಕ್ಷೆ |
January 13, 2025
1:18 PM
by: ಸಾಯಿಶೇಖರ್ ಕರಿಕಳ
ಸಂಸ್ಕೃತ ಕೈಬಿಟ್ಟರೆ ಕನ್ನಡಕ್ಕೇ ನಷ್ಟ  | ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯ
January 12, 2025
9:20 PM
by: The Rural Mirror ಸುದ್ದಿಜಾಲ
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆ ಉತ್ತರ ಕನ್ನಡ ಜಿಲ್ಲೆಯಲ್ಲಿದೆ
January 12, 2025
9:08 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror