ಸುಳ್ಯ ನಗರ ಪಂಚಾಯತ್ ವತಿಯಿಂದ ತ್ಯಾಜ್ಯ ವಿಲೇವಾರಿ ಆರಂಭ

July 2, 2019
10:11 PM

ಸುಳ್ಯ: ಸುಳ್ಯ ನಗರ ಪಂಚಾಯತ್  ಕಚೇರಿ ಸಮೀಪದ ಕಟ್ಟಡದಲ್ಲಿ ತುಂಬಿಡಲಾಗಿರುವ ತ್ಯಾಜ್ಯ ವಿಲೇವಾರಿಗೆ ಕ್ರಮ ಆರಂಭವಾಗಿದೆ. ನಗರದಲ್ಲಿ ಸಂಗ್ರಹವಾಗುವ ಹಸಿ ಕಸವನ್ನು ಗೊಬ್ಬರ ತಯಾರಿಗೆ ಕಳುಹಿಸಲಾಗುತ್ತದೆ. ಆದರೆ ಒಣ ಕಸವನ್ನು ನಗರ ಪಂಚಾಯತ್ ಕಚೇರಿ ಬಳಿಯ ಕಟ್ಟಡದಲ್ಲಿ ತುಂಬಿಡುವುದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರೇ ಸ್ಥಳಕ್ಕೆ ಆಗಮಿಸಿ ಕಸವನ್ನು ತೆರವು ಮಾಡಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ಕಸವನ್ನು ಇಲ್ಲಿಂದ ತೆರವು ಮಾಡಲಾಗುತಿದೆ. ಇಲ್ಲಿಂದ ಕಸವನ್ನು ಲಾರಿಯಲ್ಲಿ ತುಂಬಿ ಬೇರೆ ಕಡೆಗೆ ಸಾಗಿಸಿ ವಿಲೇವಾರಿ ಮಾಡಲಾಗುತಿದೆ ಎಂದು ನಗರ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ಕಸವನ್ನು ನಗರ ಪಂಚಾಯತ್ ಕಚೇರಿ ಸಮೀಪವೇ ತುಂಬಿಡುವುದರಿಂದ ದುರ್ನಾತ ಬೀರುತ್ತಿತ್ತು. ಇದು ಭಾರೀ ವಿವಾದಕ್ಕೂ ಕಾರಣವಾಗಿತ್ತು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror