ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ವಾರ್ಡ್ ಸಂಖ್ಯೆ 1ರಿಂ-10 ರವರೆಗೆ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ ಚುನಾವಣಾಧಿಕಾರಿ ಮತ್ತು ಐವರ್ನಾಡು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ಸಹಾಯಕ ಚುನಾವಣಾಧಿಕಾರಿಯಾಗಿದ್ದಾರೆ.
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ ಕೊಯಿಂಗಾಜೆ ಸೆಕ್ಟರ್ ಅಧಿಕಾರಿಯಾಗಿದ್ದಾರೆ. ವಾರ್ಡ್ ಸಂಖ್ಯೆ 11ರಿಂದ 20ರವರೆಗೆ ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಚುನಾವಣಾಧಿಕಾರಿ ಮತ್ತು ಕೊಲ್ಲಮೊಗ್ರ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ರವಿಚಂದ್ರ ಸಹಾಯಕ ಚುನಾವಣಾಧಿಕಾರಿಯಾಗಿದ್ದಾರೆ. ಮಹಾಬಲ ಕುಳ ಸೆಕ್ಟರ್ ಅಧಿಕಾರಿಯಾಗಿದ್ದಾರೆ. ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್.ಮಧುಕುಮಾರ್ ನೀತಿ ಸಂಹಿತೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel