ಸುಳ್ಯ: ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ ಇಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಲೋಕಸಭಾ ಚುನಾವಣೆಯ ಬಗ್ಗೆ ಹಾಗೂ ಪಕ್ಷದ ಇತರ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.ಪ್ರತೀ ಬೂತುಗಳ ಮತದಾನದ ಬಗ್ಗೆ ಹಾಗೂ ಶೇಕಡಾವಾರು ಮತದಾನ ಮತ್ತು ಪಕ್ಷಕ್ಕೆ ಬಿದ್ದಿರಬಹುದಾದ ಮತಗಳ ಬಗ್ಗೆ ಆತ್ಮಾವಲೋಕನ ನಡೆಯಿತು.
ಕೆಪಿಸಿಸಿ ಕಾರ್ಯದರ್ಶಿ ಗಳಾದ ಎಂ ವೆಂಕಪ್ಪ ಗೌಡ, ಭರತ್ ಮುಂಡೋಡಿ, ಡಿಸಿಸಿ ಕಾರ್ಯದರ್ಶಿ ಪಿಎಸ್ ಗಂಗಾಧರ , ಪ್ರಚಾರ ಸಮಿತಿ ಅಧ್ಯಕ್ಷ ರಾಜಾರಾಮ್ ಭಟ್ ಬೆಟ್ಟ, ರಾಜ್ಯ ವಕ್ಫ್ ಸಮಿತಿ ಸದಸ್ಯ ಸಂಶುದ್ದೀನ್, ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಕೋಲ್ಚಾರು, ಹಿರಿಯರಾದ ರಾಜೀವಿ ರೈ, ಎಸ್ ಸಿ ಘಟಕದ ಅಧ್ಯಕ್ಷೆ ಲಕ್ಷ್ಮಿ ಸುಬ್ರಹ್ಮಣ್ಯ , ಎಸ್ ಟಿ ಘಟಕದ ಅಧ್ಯಕ್ಷ ಪರಮೇಶ್ವರ ಕೆಂಬಾರೆ , ಯೂತ್ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಕೊಕ್ಕೋ, ನಗರ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಅಂಬೆಕಲ್ಲು, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ನಾಯಕರುಗಳು, ಕಾರ್ಯಕರ್ತರು ಭಾಗವಹಿಸಿದ್ದರು .
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel