ಸುಳ್ಯ: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಸುಳ್ಯ ಮಂಡಲದಲ್ಲಿ ಚಾಲನೆ ದೊರೆತಿದೆ. ಸುಳ್ಯ ಮಂಡಲದ ಎಂಟು ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಮುಖ ನಾಯಕರು ಭಾಗವಹಸಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
Advertisement
ಸುಳ್ಯ ಕ್ಷೇತ್ರದ ವಿವಿಧ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ನಡೆದ ಸದಸ್ಯತಾ ಅಭಿಯಾನ ಕಾರ್ಯಾಗಾರ ಸಂಘಟನಾ ಪರ್ವದಲ್ಲಿ ಸದಸ್ಯತ್ವ ಅಭಿಯಾನದ ಜಿಲ್ಲಾ ಸಂಚಾಲಕ ಗೋಪಾಲಕೃಷ್ಣ ಹೇರಳೆ, ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಭಾಗೀರಥಿ ಮುರುಳ್ಯ ಮತ್ತಿತರ ನಾಯಕರು ಭಾಗವಹಿಸಿದ್ದಾರೆ. ಶುಲ್ಕರಹಿತ ನಂಬರ್ ಗೆ ಕರೆ ನೀಡುವ ಮೂಲಕ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಮಹಾಶಕ್ತಿ ಕೇಂದ್ರದಲ್ಲಿ ಆರಂಭಗೊಂಡ ಸದಸ್ಯತ್ವ ಅಭಿಯಾನ ಮುಂದೆ ಗ್ರಾಮ ಮಟ್ಟದಲ್ಲಿ ನಡೆಯಲಿದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement