ಸುಳ್ಯ: ಸುಳ್ಯದ ಉಪನೋಂದಣಿ ಕಚೇರಿಯ ಅಧಿಕಾರಿಯಿಂದ ನಿರಂತರವಾಗಿ ನಡೆಯುತ್ತಿದ್ದ ಲಂಚಾವತಾರ, ಭ್ರಷ್ಟಾವಾರದ ಬಗ್ಗೆ ಮಾಧ್ಯಮಗಳಲ್ಲಿ ವಿಡಿಯೋ ಸಹಿತ ವರದಿಯಾಗಿರುವುದು ರೈತರಿಗೆ ಹಾಗೂ ಶ್ರಮಿಕರಿಗೆ ಸಂತಸವಾಗಿದ್ದು, ಆ ಕಚೇರಿಯ ನೈಜ ಸಂಗತಿ ಅನಾವರಣಗೊಂಡಿದೆ. ಈ ಬಗ್ಗೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿ ಈ ಲಂಚ ಹಗರಣದ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಆಮ್ ಆದ್ಮೀ ಪಕ್ಷದ ಅಶೋಕ್ ಎಡಮಲೆ ಇ ಮೈಲ್ ಮೂಲಕ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಇ ಮೈಲ್ ಮೂಲಕ ಒತ್ತಾಯಿಸಿದ್ದಾರೆ.
ಸಾರ್ವಜನಿಕರೂ ಇ ಮೈಲ್ ಅಥವಾ ಪತ್ರ ಬರೆದು ಒತ್ತಾಯ ಮಾಡಬೇಕಿದೆ. ಈ ಮೂಲಕ ಸುಳ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಬೇಕಿದೆ. ಜನಪ್ರತಿನಿಧಿಗಳು ಭ್ರಷ್ಟಾಚಾರ, ಲಂಚ ಪಡೆಯುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಬೇಕಿದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಸುಳ್ಯ ಲಂಚಾವತಾರ : ನೋಂದಣಿ ಮಹಾಪರಿವೀಕ್ಷಕರಿಗೆ ದೂರು"