ಸುಳ್ಯ: ಲೋಕಸಭಾ ಚುನಾವಣೆಗೆ ಸಿದ್ಧತೆ ಪೂರ್ಣ

Advertisement

ಸುಳ್ಯ: ಲೋಕಸಭಾ ಚುನಾವಣೆಗೆ ಸುಳ್ಯ ಕ್ಷೇತ್ರದಲ್ಲಿ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು ಇಂದು ಬೆಳಿಗ್ಗೆ ಏಳರಿಂದ ಮತದಾನ ಆರಂಭವಾಗಲಿದೆ. ಸುಳ್ಯ ಕ್ಷೆತ್ರದ ಮಸ್ಟರಿಂಗ್ ಕೇಂದ್ರವಾದ ಸುಳ್ಯ ನೆಹರೂ ಸ್ಮಾರಕ ಮಹಾವಿದ್ಯಾಲಯದಿಂದ ಬುಧವಾರ ಬೆಳಿಗ್ಗಿನಿಂದಲೇ ಮತಯಂತ್ರ, ವಿವಿ ಪ್ಯಾಟ್ ಮತ್ತು ಇತರ ಸಾಮಾಗ್ರಿಗಳನ್ನು ವಿತರಿಸಲಾಯಿತು. ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅಗತ್ಯ ಸಾಮಾಗ್ರಿಗಳೊಂದಿಗೆ ಮಧ್ಯಾಹ್ನದ ವೇಳೆಗೆ ಮತದಾನ ಕೇಂದ್ರಗಳಿಗೆ ತೆರಳಿದರು. ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡ ಐದು ಮಂದಿಯ ತಂಡ ಮತ್ತು ಭದ್ರತಾ ಸಿಬ್ಬಂದಿಗಳು ಮತಗಟ್ಟೆಗಳತ್ತ ಪ್ರಯಾಣ ಬೆಳೆಸಿದರು.

Advertisement


ಕ್ಷೇತ್ರದ 231 ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗು ಭದ್ರತಾ ಸಿಬ್ಬಂದಿಗಳು ತೆರಳಿದ್ದಾರೆ. 27 ಕೆಎಸ್‍ಆರ್‍ಟಿಸಿ ಬಸ್, 37 ಜೀಪುಗಳು, 25 ವ್ಯಾನ್‍ಗಳು ಸೇರಿದಂತೆ ಒಟ್ಟು 79 ವಾಹನಗಳಲ್ಲಿ ಅಧಿಕಾರಿಗಳು ಮತಗಟ್ಟೆಗಳಿಗೆ ತೆರಳಿದರು. 18 ಮಂದಿ ಸೆಕ್ಟರ್ ಆಫೀಸರ್‍ಗಳು, ಮೂರು ಫ್ಲೈಯಿಂಗ್ ಸ್ಕ್ವಾಡ್‍ಗಳು, ಮೂರು ವೀಡಿಯೋ ಸರ್ವೆಲೆನ್ಸ್ ತಂಡಗಳು, ಐದು ಕಡೆಗಳಲ್ಲಿ ಚೆಕ್ ಪೋಸ್ಟ್‍ಗಳಲ್ಲಿ ಅಧಿಕಾರಿಗಳು ಕರ್ತವ್ಯದಲ್ಲಿದ್ದಾರೆ.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಸುಳ್ಯ: ಲೋಕಸಭಾ ಚುನಾವಣೆಗೆ ಸಿದ್ಧತೆ ಪೂರ್ಣ"

Leave a comment

Your email address will not be published.


*