ಸುಳ್ಯ: ಕರ್ನಾಟಕ ಸರಕಾರದ ನೂತನ ಜವಳಿ ನೀತಿ ಯೋಜನೆಯಡಿ ಸುಳ್ಯ ಮೀಸಲು ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಲಾಖಾ ಯೋಜನೆಗಳ ಕುರಿತು 2 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವು ಸೆ.30 ರಂದು ಬೆಳಗ್ಗೆ 10.30 ಗಂಟೆಗೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ.
ಜವಳಿ ಆಧಾರಿತ ಕೈಗಾರಿಕಾ ಘಟಕಗಳಾದ ಸಿದ್ಧ ಉಡುಪು ಘಟಕ, ಸ್ಯಾನಿಟರಿ ನ್ಯಾಪ್ಕಿನ್ ಘಟಕ ಹಾಗೂ ಎಸ್.ಎಂ.ಇ ಘಟಕಗಳನ್ನು ಪ್ರಾರಂಭಿಸುವ ಆಸಕ್ತ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಫಲಾನುಭವಿಗಳು ಭಾಗವಹಿಸಬಹುದು. ಆಸಕ್ತರು ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಇಂಡಸ್ಟ್ರಿಯಲ್ ಏರಿಯಾ, ಯೆಯ್ಯಾಡಿ, ಮಂಗಳೂರು ಕಚೇರಿ ಹಾಗೂ ಮೊಬೈಲ್ ಸಂಖ್ಯೆ: 9481628584 ನ್ನು ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement