ಸುಳ್ಯ: ನಿರೀಕ್ಷೆಗೂ ಮೀರಿದ ಸ್ಥಾನಗಳನ್ನು ಪಡೆಯುವ ಮೂಲಕ ಬಿಜೆಪಿ ಸತತ ನಾಲ್ಕನೇ ಬಾರಿ ನಗರ ಪಂಚಾಯತ್ ಆಡಳಿತವನ್ನು ಬಿಜೆಪಿ ತೆಕ್ಕೆಗೆ ಹಾಕಿಕೊಂಡಿದೆ.
ಕಳೆದ ಬಾರಿ 18 ಸ್ಥಾನಗಳಿದ್ದ ಸಂದರ್ಭದಲ್ಲಿ 12 ಸ್ಥಾನ ಪಡೆದಿದ್ದ ಬಿಜೆಪಿ ಈ ಬಾರಿ 20ರಲ್ಲಿ 14 ಸ್ಥಾನ ಪಡೆಯುವ ಮೂಲಕ ತನ್ನ ಬಲವನ್ನು ವೃದ್ಧಿಸಿ ತನ್ನ ಪ್ರಾಬಲ್ಯವನ್ನು ಮೆರೆದಿದೆ. ಎಲ್ಲಾ 20 ಸ್ಥಾನಗಳಲ್ಲಿ 19 ಹೊಸ ಮುಖಗಳಿಗೆ ಅವಕಾಶ ನೀಡಿ ಹೊಸ ಪ್ರಯೋಗಕ್ಕೆ ಬಿಜೆಪಿ ಮುಂದಾಗಿತ್ತು. ಈ ಪ್ರಯೋಗ ಯಶಸ್ವಿಯಾಗಿದೆ ಎಂದು ಬಿಜೆಪಿ ಗೆಲುವು ತೋರಿಸಿದೆ. ಇದರಲ್ಲಿ 9 ಮಂದಿ ಮಹಿಳೆಯರು, ಐದು ಮಂದಿ ಪುರುಷರು ಆಯ್ಕೆಯಾಗಿದ್ದಾರೆ. ಮಾಜಿ ಸದಸ್ಯೆ ಸರೋಜಿನಿ ಪೆಲ್ತಡ್ಕ ಹೊರತುಪಡಿಸಿ ಉಳಿದ 13 ಮಂದಿಯೂ ನ.ಪಂ.ಗೆ ಹೊಸ ಮುಖಗಳಾಗಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಸುಳ್ಯ ನಗರ ಪಂಚಾಯತ್ : ಸ್ಥಾನ ಹೆಚ್ಚಿಸಿಕೊಂಡ ಬಿಜೆಪಿ"