ಸ್ನೇಹ ಭಟ್ ಚೂಂತಾರು ಅವರ ಶಾಸ್ತ್ರೀಯ ಮತ್ತು ಜನಪದ ನೃತ್ಯ ತರಗತಿ ಉದ್ಘಾಟನೆ

January 6, 2020
2:29 PM

ಬೆಳ್ಳಾರೆ: ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ.) ಮಂಗಳೂರು ಹಾಗೂ ವೈಷ್ಣವಿ ನಾಟ್ಯಲಯ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಇವರ ನೃತ್ಯ ನಿರ್ದೇಶನದಲ್ಲಿ ಬೆಳೆದ ಸ್ನೇಹ ಭಟ್ ಚೂಂತಾರು ಇವರ ಶಾಸ್ತ್ರೀಯ ಮತ್ತು ಜನಪದ ನೃತ್ಯ ತರಗತಿಯನ್ನು ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿ ಅಧ್ಯಕ್ಷರಾದ ದಯಾನಂದ ಕತ್ತಲ್ ಸಾರ್ ದೀಪ ಬೆಳಗಿಸಿ ಉದ್ಘಾಟಿಸಿ ಸ್ನೇಹಳಿಗೆ ಸರಿಯಾದ ಗುರು ಸಿಕ್ಕಿದ್ದಾರೆ ಹಾಗೂ ಒಳ್ಳೆಯ ಗುರಿಯೂ ಇದೆ, ತಾನು ಕಲಿತ ಕಲೆಯನ್ನು ಇನ್ನೊಬ್ಬರಿಗೆ ಕಲಿಸುವ ಮನಸ್ಸು ಮಾಡಿರುವುದು ಹಾಗೂ ಇದಕ್ಕೆ ತನ್ನ ಮನೆಯವರ ಬೆಂಬಲ ಇರುವುದರಿಂದ ನೃತ್ಯ ತರಗತಿಯಲ್ಲಿ ಸಾಧನೆಯನ್ನು ಮಾಡಿ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸ್ನೇಹ ಭಟ್ ಚೂಂತಾರು ಇವರು ತಮ್ಮ ಗುರುಗಳಾದ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಇವರಿಗೆ ಗುರುವಂದನೆಯನ್ನು ಸಲ್ಲಿಸಿದರು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ.) ಮಂಗಳೂರು ಇದರ ಗೌರವ ಅಧ್ಯಕ್ಷರಾದ ಚೂಂತಾರು ಲಕ್ಷ್ಮೀ ನಾರಾಯಣ ಭಟ್ ಗೌರವ ಉಪಸ್ಥಿತರಾಗಿದ್ದರು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ.) ಮಂಗಳೂರು ಇದರ ಟ್ರಸ್ಟಿಯಾದ  ಮಹೇಶ್ ಭಟ್ ಚೂಂತಾರು ಸ್ವಾಗತಿಸಿದರು.  ಸ್ನೇಹ ಭಟ್ ಧನ್ಯವಾದ ಸಲ್ಲಿಸಿದರು. ಕಾರ್ಯದರ್ಶಿಯಾದ ಮುರಳಿ ಮೋಹನ್ ಚೂಂತಾರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror