ಹಣ ಪಾವತಿಯಲ್ಲಿ ವಿಳಂಬ : ಕ್ಯಾಂಪ್ಕೋ ವಿಷಾದ

September 17, 2019
6:36 PM

ಮಂಗಳೂರು: ಕೇಂದ್ರ ಸರಕಾರ ನಗದುರಹಿತ ವ್ಯವಹಾರಗಳನ್ನು ಉತ್ತೇಜಿಸುವ ಸಲುವಾಗಿ ತಂದಿರುವ ಹೊಸ ನಿಯಮಗಳ ಅನುಸಾರ ಕ್ಯಾಂಪ್ಕೊ ಸಂಸ್ಥೆಯು ಬೆಳೆಗಾರರಿಗೆ ಅಡಿಕೆ ಖರೀದಿ ಮೇಲಿನ ಬಿಲ್ ಪಾವತಿಯನ್ನು ಬ್ಯಾಂಕಿಂಗ್ ವ್ಯವಸ್ಥೆಯ ಚೆಕ್ ಅಥವಾ ನೆಫ್ಟ್ ಮೂಲಕ ಮಾಡುತ್ತಿದೆ.ಆದರೆ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷಗಳಿಂದ ಸಮಸ್ಯೆಯಾಗಿರುವುದು  ಗಮನಕ್ಕೆ ಬಂದಿದೆ.ಸದಸ್ಯರಿಗೆ ಉಂಟಾಗುತ್ತಿರುವ ಅನನುಕೂಲತೆಯ ಬಗ್ಗೆ ಸಂಸ್ಥೆಯು ವಿಷಾದ ವ್ಯಕ್ತಪಡಿಸುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಕೇಂದ್ರ ಸರಕಾರ ನಗದುರಹಿತ ವ್ಯವಹಾರಗಳನ್ನು ಉತ್ತೇಜಿಸುವ ಸಲುವಾಗಿ ತಂದಿರುವ ಹೊಸ ನಿಯಮಗಳ ಅನುಸಾರ ಕ್ಯಾಂಪ್ಕೊ ಸಂಸ್ಥೆಯು ಬೆಳೆಗಾರರಿಗೆ ಅಡಿಕೆ ಖರೀದಿ ಮೇಲಿನ ಬಿಲ್ ಪಾವತಿಯನ್ನು ಬ್ಯಾಂಕಿಂಗ್ ವ್ಯವಸ್ಥೆಯ ಚೆಕ್ ಅಥವಾ ನೆಫ್ಟ್ ಮೂಲಕ ಮಾಡುತ್ತಿದೆ.  ಕಳೆದ ಕೆಲವು ದಿನಗಳಿಂದ ಸದಸ್ಯರ ಖಾತೆಗಳಿಗೆ ಹಣದ ಜಮಾವಣೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಚರ್ಚೆಯಾಗುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ವಿಚಾರಿಸಲಾಗಿದ್ದು, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷಗಳು ಇದಕ್ಕೆ ಕಾರಣವೆಂಬುದು ತಿಳಿದುಬಂದಿರುತ್ತದೆ. ಶೀಘ್ರದಲ್ಲಿಯೇ ಈ ಸಮಸ್ಯೆಯನ್ನು ಪರಿಹರಿಸುವುದಾಗಿ ಬ್ಯಾಂಕ್ ಅಧಿಕಾರಿಗಳು ಭರವಸೆ ನೀಡಿರುತ್ತಾರೆ. ಕ್ಯಾಂಪ್ಕೊತನ್ನ ಸದಸ್ಯ ಸಮುದಾಯದ ಬಗ್ಗೆ ಕಳಕಳಿಯನ್ನು ಹೊಂದಿದ್ದು, ಸದಸ್ಯರಿಗೆ ಉಂಟಾಗುತ್ತಿರುವ ಅನನುಕೂಲತೆಯ ಬಗ್ಗೆ ಸಂಸ್ಥೆಯು ವಿಷಾದ ವ್ಯಕ್ತಪಡಿಸುತ್ತದೆ ಮತ್ತು ಸಮಸ್ಯೆಯ ಪರಿಹಾರಕ್ಕಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು ಸಂಸ್ಥೆಯು ಮಾಡುತ್ತಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror